
ರಾಹುಲ್ ಗಾಂಧಿ
(ಪಿಟಿಐ ಚಿತ್ರ)
ಪಟ್ನಾ: ಪ್ರಧಾನಿ ನರೇಂದ್ರ ಮೋದಿ ನಕಲಿ ಪದವಿ ಪ್ರಮಾಣ ಪತ್ರ ಹೊಂದಿದ್ದಾರೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಇಂದು (ಮಂಗಳವಾರ) ಗಂಭೀರವಾದ ಆರೋಪ ಮಾಡಿದ್ದಾರೆ.
ಬಿಹಾರ ಚುನಾವಣಾ ಸಮಾವೇಶದದಲ್ಲಿ ಈ ಕುರಿತು ಮಾತನಾಡಿರುವ ರಾಹುಲ್, ಶಿಕ್ಷಣದ ಕುರಿತು ಪ್ರಧಾನಿಗೆ ಹೆಚ್ಚಿನ ಒಲವು ಇಲ್ಲ ಎಂದೂ ಆರೋಪಿಸಿದ್ದಾರೆ.
ಮೊದಲ ಹಂತದ ಮತದಾನದ ಪ್ರಚಾರಕ್ಕೆ ಇಂದು ಕೊನೆಯ ದಿನವಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾವೇಶಗಳಲ್ಲಿ ಸತತ ಭಾಷಣ ಮಾಡಿರುವ ರಾಹುಲ್, ಎನ್‌ಡಿಎ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಾಚೀನ ಕಾಲದಲ್ಲಿ ನಳಂದವು ಅತಿ ಶ್ರೇಷ್ಠ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿತ್ತು. ಚೀನಾ, ಜಪಾನ್ ಮತ್ತು ಕೊರಿಯಾದ ವಿದ್ಯಾರ್ಥಿಗಳು ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಆದರೆ ಪ್ರಧಾನಿ ಅವರಿಗೆ ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಆಸಕ್ತಿ ಇಲ್ಲ. ಅವರು ನಕಲಿ ಪದವಿಯನ್ನು ಹೊಂದಿದ್ದಾರೆ ಎಂದು ರಾಹುಲ್ ಆರೋಪ ಮಾಡಿದ್ದಾರೆ.
ಒಂದು ವೇಳೆ ಇಂಡಿಯಾ ಮೈತ್ರಿ ಅಧಿಕಾರಕ್ಕೆ ಬಂದರೆ ನಳಂದದಲ್ಲಿ ಉನ್ನತ ಶಿಕ್ಷಣ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ರಾಹುಲ್ ಭರವಸೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.