ADVERTISEMENT

ಸರ್ಕಾರಿ ನೌಕರಿಯ ಮೀಸಲಾತಿಗಾಗಿ ನಕಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿದ ಮಹಿಳೆ

ಪಿಟಿಐ
Published 11 ಜನವರಿ 2026, 10:24 IST
Last Updated 11 ಜನವರಿ 2026, 10:24 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಪಾಲ್ಘರ್: ಸರ್ಕಾರಿ ನೌಕರಿಗಾಗಿ 26 ವರ್ಷದ ಮಹಿಳೆಯೊಬ್ಬರು ನಕಲಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಜರುಗಿದೆ.

ಪುಣೆ ಮೂಲದ ಮಹಿಳೆಯು, 2023ರಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕಾಗಿ ನಡೆದ ನೇಮಕಾತಿ ವೇಳೆ ಮೀಸಲಾತಿಗಾಗಿ ಅಂಗವೈಕಲ್ಯ ಪ್ರಮಾಣಪತ್ರ ನೀಡಿದ್ದಾರೆ. ಆ ಮೂಲಕ ಸರ್ಕಾರಿ ನೌಕರಿಯನ್ನು ಕೂಡ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ(ಜ.11) ತಿಳಿಸಿದ್ದಾರೆ.

ADVERTISEMENT

ಆರೋಪಿಯು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಯೋಗಾಲಯ ತಂತ್ರಜ್ಞೆಯಾಗಿ ನೇಮಕವಾಗಿದ್ದರು. ಪಾಲ್ಘರ್‌ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯು ಆರೋಪಿಯ ದಾಖಲಾತಿ ಪರಿಶೀಲನೆ ನಡೆಸಲು ತಿಳಿಸಿದಾಗ ಅಕ್ರಮವು ಬಯಲಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಾಥಮಿಕ ತನಿಖೆಯ ವೇಳೆ ಯಾವುದೇ ಲೋಪವು ಪತ್ತೆಯಾಗಿಲ್ಲ. ಆದರೆ, ಆರೋಪಿಯು ವೈದ್ಯಕೀಯ ಪ್ರಮಾಣಪತ್ರವನ್ನು ಧುಲೆಯಲ್ಲಿರುವ ಬಾಹುಸಾಹೇಬ್‌ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಪಡೆದುಕೊಂಡಿರುವುದಾಗಿ ತಿಳಿಸಿದ್ದು, ಆಸ್ಪತ್ರೆಯಲ್ಲಿ ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ. ಅಂಗವೈಕಲ್ಯ ಪ್ರಮಾಣಪತ್ರ ನೀಡಿರುವ ಕುರಿತು ಕೂಡ ಯಾವುದೇ ಮಾಹಿತಿಯಿಲ್ಲ. ಆರೋಪಿಯು ಅಂಗವೈಕಲ್ಯ ಪ್ರಮಾಣಪತ್ರವನ್ನು ನಕಲು ಮಾಡುವ ಮೂಲಕ ಉದ್ಯೋಗ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.

ಭಾರತೀಯ ನ್ಯಾಯ ಸಂಹಿತೆ ಪ್ರಕಾರ ಮೋಸ ಹಾಗೂ ನಕಲು ಮಾಡಿದ ಆರೋಪದ ಮೇಲೆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಬಂಧನಕ್ಕೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.