ADVERTISEMENT

ನಕಲಿ ವೈದ್ಯ ಪ್ರಕರಣ: ದಾಮೋಹ್‌ ಮಿಷನರಿ ಆಸ್ಪತ್ರೆಯ ಕ್ಯಾಥ್‌ ಲ್ಯಾಬ್‌ಗೆ ಬೀಗ

ಪಿಟಿಐ
Published 11 ಏಪ್ರಿಲ್ 2025, 5:25 IST
Last Updated 11 ಏಪ್ರಿಲ್ 2025, 5:25 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ದಾಮೋಹ್ (ಮಧ್ಯಪ್ರದೇಶ): ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದು 7 ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ದಾಮೋಹ್ ಮಿಷನರಿ ಆಸ್ಪತ್ರೆಯ ಕ್ಯಾಥ್‌ ಲ್ಯಾಬ್ ಅನ್ನು ಮುಚ್ಚಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರು ಸರ್ಕಾರಿ ವೈದ್ಯರ ತಂಡವು ಆಸ್ಪತ್ರೆಗೆ ಭೇಟಿ ನೀಡಿ ಕ್ಯಾಥ್‌ ಲ್ಯಾಬ್ ಅನ್ನು ಸೀಲ್‌ ಮಾಡಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

‘ಎಲ್ಲಾ ಪ್ರಕರಣಗಳು ಕ್ಯಾಥ್‌ ಲ್ಯಾಬ್‌ಗೆ ಸಂಬಂಧಿಸಿರುವುದರಿಂದ ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಪುರಾವೆಗಳನ್ನು ಹೊಂದಿರುವುದರಿಂದ ಜಿಲ್ಲಾಡಳಿತದ ಮಾರ್ಗಸೂಚಿಗಳ ಮೇರೆಗೆ ಕ್ಯಾಥ್‌ ಲ್ಯಾಬ್‌ ಅನ್ನು ಸೀಲ್‌ ಮಾಡಲಾಗಿದೆ’ ಎಂದು ತಂಡದ ಸದಸ್ಯ ಡಾ. ವಿಕ್ರಾಂತ್‌ ಚೌಹಾಣ್‌ ತಿಳಿಸಿದ್ದಾರೆ.

ಆರೋಪಿಯನ್ನು ಬಂಧಿಸಲಾಗಿದ್ದು, ಮಂಗಳವಾರ ಸ್ಥಳೀಯ ನ್ಯಾಯಾಲಯವು ಅವರನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಮಿಷನರಿ ಆಸ್ಪತ್ರೆಯಲ್ಲಿ ನಕಲಿ ಹೃದ್ರೋಗ ತಜ್ಞರಿಂದ ಚಿಕಿತ್ಸೆ ಪಡೆದ 7 ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿತ್ತು. ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 'ಡಾ.ಎನ್. ಜಾನ್ ಕ್ಯಾಮ್' ಎಂಬ ವ್ಯಕ್ತಿ ವಿದೇಶದಲ್ಲಿ ಶಿಕ್ಷಣ ಮತ್ತು ತರಬೇತಿ ಪಡೆದಿರುವುದಾಗಿ ಹೇಳಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.