
ಅಮರಾವತಿ: ನಕಲಿ ಮದ್ಯವನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್‌ಆರ್‌ಸಿಪಿಯ ಹಿರಿಯ ನಾಯಕ ಜೋಗಿ ರಮೇಶ್ ಮತ್ತು ಅವರ ಸಹೋದರನನ್ನು ಬಂಧಿಸಲಾಗಿದೆ.
ಅಬಕಾರಿ ಇಲಾಖೆಯ ಅಧಿಕಾರಿಗಳು ಜೋಗಿ ರಮೇಶ್ ಮತ್ತು ಅವರ ಕಿರಿಯ ಸಹೋದರ ಜೋಗಿ ರಾಮು ಅವರನ್ನು ಭಾನುವಾರ ಬೆಳಗ್ಗೆ ಬಂಧಿಸಿದ್ದು, ತಡರಾತ್ರಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದರು ಎಂದು ಆಂಧ್ರಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯದ ವಿವಿಧೆಡೆ ನಕಲಿ ಮದ್ಯ ತಯಾರಿಕೆ, ವಿತರಣೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿ, ವಶಪಡಿಸಿಕೊಂಡ ನಂತರ ಇಬ್ಬರನ್ನೂ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಜೋಗಿ ಬಂಧನವನ್ನು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಖಂಡಿಸಿದ್ದು, ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
‘ರಮೇಶ್ ಬಂಧನವು ಕಾನೂನುಬಾಹಿರ ಮತ್ತು ರಾಜಕೀಯ ಪ್ರತೀಕಾರವಾಗಿದೆ. ನಾಯ್ಡು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.