ADVERTISEMENT

ಸುಳ್ಳು ಸುದ್ದಿ: ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್‌

ನಿಲುವು ತಿಳಿಸಲು ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

ಪಿಟಿಐ
Published 11 ಮಾರ್ಚ್ 2020, 20:19 IST
Last Updated 11 ಮಾರ್ಚ್ 2020, 20:19 IST
ದೆಹಲಿ ಹೈಕೋರ್ಟ್‌
ದೆಹಲಿ ಹೈಕೋರ್ಟ್‌   

ನವದೆಹಲಿ: ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ ಹಾಗೂ ದ್ವೇಷಭಾಷಣ ಹರಡುವುದನ್ನು ತಡೆಗಟ್ಟುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದ್ದು, ಈ ಕುರಿತು ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆದೆಹಲಿ ಹೈಕೋರ್ಟ್‌ ಬುಧವಾರ ಸೂಚಿಸಿದೆ.

ಫೇಸ್‌ಬುಕ್‌, ಟ್ವಿಟರ್‌ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣ ಹಾಗೂ ಆನ್‌ಲೈನ್‌ ವೇದಿಕೆಗಳ ಮೂಲಕ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದಕ್ಕೆ ತಡೆ ನೀಡುವಂತೆ ಕೋರಿ ಆರ್‌ಎಸ್‌ಎಸ್‌ನೊಂದಿಗೆ ಗುರುತಿಸಿಕೊಂಡಿದ್ದ ಚಿಂತಕ ಕೆ.ಎನ್‌.ಗೋವಿಂದಾಚಾರ್ಯ ಅರ್ಜಿ ಸಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT