ADVERTISEMENT

ಉತ್ತರ ಪ್ರದೇಶದಲ್ಲಿ ನಕಲಿ ನೋಟುಗಳ ಜಾಲ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 10:09 IST
Last Updated 1 ಏಪ್ರಿಲ್ 2023, 10:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶಹಜಹಾನ್‌ಪುರ(ಉತ್ತರ ಪ್ರದೇಶ) ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯಲ್ಲಿ ಶನಿವಾರ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳಿಂದ ₹42,000 ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಗೋದಾಮಿನಲ್ಲಿ ನಕಲಿ ನೋಟುಗಳನ್ನು ಮುದ್ರಿಸಿದ್ದಕ್ಕಾಗಿ ಆರೋಪಿಗಳಾದ ಸಚಿನ್, ಅಖಿಲೇಶ್ ಮತ್ತು ವಿವೇಕ್ ಮೌರ್ಯ ಅವರನ್ನು ಬಂಧಿಸಿದ್ದೇವೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಎಸ್ ಆನಂದ್ ಮಾಹಿತಿ ನೀಡಿದ್ದಾರೆ.

ADVERTISEMENT

ಆರೋಪಿಗಳು ನೋಟು ತಯಾರಿಸುತ್ತಿದ್ದ ಸ್ಥಳದಲ್ಲಿ ₹42,000 ನಕಲಿ ನೋಟುಗಳನ್ನು ಹಾಗೂ ನಕಲಿ ನೋಟುಗಳ ಮುದ್ರಣಕ್ಕೆ ಬಳಸಲಾದ ಕಚ್ಚಾ ವಸ್ತು, ಶಾಯಿ ಮತ್ತು ಪ್ರಿಂಟರ್ ಅನ್ನೂ ವಶಪಡಿಸಿಕೊಂಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಸಣ್ಣ ಪ್ರಮಾಣದಲ್ಲಿ ನಕಲಿ ನೋಟುಗಳನ್ನು ಮುದ್ರಿಸಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಚಲಾವಣೆ ಮಾಡುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.