ಎಐ ಚಿತ್ರ
ನವದೆಹಲಿ: ಮದ್ಯದ ಅಮಲಿನಲ್ಲಿ ಮೊಬೈಲ್ ಕಳೆದುಕೊಂಡ ವ್ಯಕ್ತಿಯೊಬ್ಬರು, ಹೆಂಡತಿಯ ಕೋಪದಿಂದ ತಪ್ಪಿಸಿಕೊಳ್ಳಲು ಮೊಬೈಲ್ ಕಳ್ಳತನವಾಗಿದೆ ಎಂದು ಸುಳ್ಳು ಕಥೆ ಕಟ್ಟಿರುವ ಘಟನೆ ನಡೆದಿದೆ.
ಆ. 31ರಂದು ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ಮೊಬೈಲ್ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ಅಶೋಕ್ ಕೌಶಿಕ್ ಎನ್ನುವವರು ದೂರು ದಾಖಲಿಸಿದ್ದರು. ಸಿಸಿಟಿವಿ ದೃಶ್ಯಾವಳಿ ಹಾಗೂ ಪ್ರಕರಣದ ತನಿಖೆಯಿಂದ ಇದು ನಕಲಿ ಪ್ರಕರಣ ಎನ್ನುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಯಾವುದೇ ಕಳ್ಳತನದ ಘಟನೆಯು ಕಂಡುಬಂದಿಲ್ಲ.
ಮೊಬೈಲ್ ಕಳ್ಳತನವಾಗಿರಲಿಲ್ಲ. ಮದ್ಯದ ಅಮಲಿನಲ್ಲಿ ಮೊಬೈಲ್ ಕಳೆದುಕೊಂಡಿದ್ದು, ಹೆಂಡತಿಯಿಂದ ತಪ್ಪಿಸಿಕೊಳ್ಳಲು ನಕಲಿ ಪ್ರಕರಣ ದಾಖಲಿಸಿದ್ದೆ ಎಂದು ಅಶೋಕ್ ಕೌಶಿಕ್ ಅವರು ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.