ADVERTISEMENT

ಮಧುರೈ| ನಕಲಿ ವಿಡಿಯೊ ಪ್ರಕರಣ: ಬಿಹಾರದ ಯೂಟ್ಯೂಬರ್‌ಗೆ 3 ದಿನಗಳ ಪೊಲೀಸ್ ಕಸ್ಟಡಿಗೆ

ಪಿಟಿಐ
Published 31 ಮಾರ್ಚ್ 2023, 7:02 IST
Last Updated 31 ಮಾರ್ಚ್ 2023, 7:02 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಧುರೈ(ತಮಿಳುನಾಡು): ನಕಲಿ ವಿಡಿಯೊಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿತರಾಗಿರುವ ಬಿಹಾರದ ಯೂಟ್ಯೂಬರ್ ಮನೀಶ್ ಕಶ್ಯಪ್ ಅವರನ್ನು 3 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇಲ್ಲಿನ ಸ್ಥಳೀಯ ನ್ಯಾಯಾಲಯವು ಗುರುವಾರದಂದು 3 ದಿನಗಳ ಕಾಲ ಕಶ್ಯಪ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ.

ಮಧುರೈ ಕ್ರೈಂ ಬ್ರಾಂಚ್ ಪೊಲೀಸರು ಕಶ್ಯಪ್ ವಿರುದ್ಧ ಪ್ರಕರಣ ದಾಖಲಿಸಿದ್ದು, ಪೊಲೀಸರ ವಿಶೇಷ ತಂಡ ಬಿಹಾರದಿಂದ ಆತನನ್ನು ಬಂಧಿಸಿ ಕರೆ ತಂದಿದ್ದಾರೆ.

ADVERTISEMENT

ಕಶ್ಯಪ್ ವಿರುದ್ಧ ಬಿಹಾರದ ವಿವಿಧ ಸ್ಥಳಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಬಂಧನಕ್ಕೆ ದಾಖಲೆ ಸಲ್ಲಿಸದೆ ಪೊಲೀಸರು ಬಂಧಿಸಿ ಕರೆ ತಂದಿದ್ದಾರೆ ಎಂದು ಆರೋಪಿಯ ಪರ ವಕೀಲರು ವಾದಿಸಿದ್ದಾರೆ. ಹೀಗಾಗಿ ಕಶ್ಯಪ್ ಅವರಿಗೆ ಜಾಮೀನು ನೀಡಬೇಕು ಹಾಗೂ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಬಾರದು ಮನವಿ ಮಾಡಿದ್ದರು.

ಕಶ್ಯಪ್ ಹಂಚಿಕೊಂಡಿರುವ ನಕಲಿ ವಿಡಿಯೊಗಳು ಜನರಲ್ಲಿ ಶಾಂತಿ ಮತ್ತು ಸಹೋದರತ್ವಕ್ಕೆ ಧಕ್ಕೆ ತಂದಿವೆ ಎಂದು ತಮಿಳುನಾಡು ಸರ್ಕಾರ ತಿಳಿಸಿದೆ. ಪೊಲೀಸರು ಆತನನ್ನು ಬಂಧಿಸಿ ವಿಚಾರಣೆ ನಡೆಸಿದರೆ ಮಾತ್ರ ಆತನ ಹಿಂದಿರುವ ಮಾಸ್ಟರ್ ಮೈಂಡ್ ಯಾರೆಂಬುದು ಗೊತ್ತಾಗಲಿದೆ ಎಂದು ಹೇಳಿದೆ.

ಎರಡೂ ಕಡೆಯ ವಾದವನ್ನು ಆಲಿಸಿದ ನ್ಯಾಯಾಲಯ ಕಶ್ಯಪ್‌ಗೆ 3 ದಿನಗಳ ಪೊಲೀಸ್ ಕಸ್ಟಡಿಗೆ ನೀಡಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಉತ್ತರ ಭಾರತದ ವಲಸೆ ಕಾರ್ಮಿಕರ ಮೇಲೆ ಹಲ್ಲೆ ನಡೆಸುತ್ತಿದ್ದಾರೆ ಎಂಬ ನಕಲಿ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.