
ಸಿಸಿಟಿವಿ ದೃಶ್ಯ
ಫರಿದಾಬಾದ್: ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಕಾರಿನಿಂದ ಹೊರ ತಳ್ಳಿದ ಘಟನೆಗೆ ಸಂಬಂಧಿಸಿದಂತೆ ಕಾರಿನ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
25 ವರ್ಷದ ವಿವಾಹಿತೆ ಮೇಲೆ ಅತ್ಯಾಚಾರ ಎಸಗಲು ಆರೋಪಿಗಳು ಬಳಸಿದ್ದ ಮಾರುತಿ ಇಕೊ ಕಾರು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರಿಯಾಗಿದೆ.
ಈ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಘಟನೆಗೆ ಪ್ರಮುಖ ಸಾಕ್ಷಿ ಎನ್ನಲಾಗಿದೆ.
ಸೋಮವಾರ ತಡರಾತ್ರಿ ಘಟನೆ ನಡೆದಿತ್ತು. ಲಿಫ್ಟ್ ನೀಡುವುದಾಗಿ ನಂಬಿಸಿ ಕರೆದೊಯ್ದಿದ್ದ ಆರೋಪಿಗಳು, ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದರು.
ಸುಮಾರು ಎರಡುವರೆ ತಾಸು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ದುಷ್ಕರ್ಮಿಗಳು, ಬಳಿಕ ಕಾರಿನಿಂದ ಹೊರದಬ್ಬಿದ್ದರು. ಘಟನೆಯಿಂದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.