ADVERTISEMENT

ಕೃಷಿ ಮಸೂದೆ ಅಂಗೀಕಾರ: ರಾಜ್ಯಸಭೆಯ ಉಪಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ

ಏಜೆನ್ಸೀಸ್
Published 23 ಸೆಪ್ಟೆಂಬರ್ 2020, 7:29 IST
Last Updated 23 ಸೆಪ್ಟೆಂಬರ್ 2020, 7:29 IST
ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ್‌ ವಿರುದ್ಧ ಪ್ರತಿಭಟಿಸಿದ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ ಬ್ರಿಯಾನ್
ರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ್‌ ವಿರುದ್ಧ ಪ್ರತಿಭಟಿಸಿದ ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ ಬ್ರಿಯಾನ್   

ನವದೆಹಲಿ: ಕೃಷಿ ಮಸೂದೆ ಅಂಗೀಕಾರ ಪ್ರಕ್ರಿಯೆಗೆ ಸಂಬಂಧಿಸಿದಂತೆರಾಜ್ಯಸಭೆಯ ಉಪಸಭಾಪತಿ ಹರಿವಂಶ್‌ ನಾರಾಯಣ್‌ ವಿರುದ್ಧ ಪ್ರತಿ ಪಕ್ಷಗಳು ಭಾನುವಾರ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಕೃಷಿಗೆ ಸಂಬಂಧಿಸಿದ ಎರಡು ಪ್ರಮುಖ ಮಸೂದೆಗಳನ್ನು ವಿರೋಧಿಸಿದ್ದ ಪ್ರತಿ ಪಕ್ಷಗಳು ಸದನದಲ್ಲಿ ತೀವ್ರ ಪ್ರತಿಭಟನೆ ನಡೆಸಿದ್ದವು. ಮಸೂದೆಗಳನ್ನು ನಿರ್ಬಂಧಿಸಲು ಸದಸ್ಯ ಬಲದ ಸಂಖ್ಯೆಗಳ ಕೊರತೆಯಿರುವ ಪ್ರತಿಪಕ್ಷಗಳು ಹೆಚ್ಚಿನ ಚರ್ಚೆಗಾಗಿ ಮಸೂದೆಗಳನ್ನು ಆಯ್ಕೆ ಸಮಿತಿಗೆ ನೀಡಬೇಕೆಂದು ಒತ್ತಾಯಿಸಿದ್ದವು.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೂ ಧ್ವನಿ ಮತದ ಮೂಲಕ ಮಸೂದೆಗಳನ್ನು ಅಂಗೀಕರಿಸಬೇಕು ಎಂದು ಉಪ ಸಭಾಪತಿ ಹರಿವಂಶ್‌ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ಆಕ್ರೋಶಗೊಂಡಿರುವ ವಿರೋಧ ಪಕ್ಷಗಳು ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ADVERTISEMENT

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ನ ಹಿರಿಯ ಸಂಸದ ಅಹ್ಮದ್‌ ಪಟೇಲ್‌, 'ಈ ದಿನವು ಇತಿಹಾಸದಲ್ಲಿ ಕಪ್ಪು ದಿನವೆಂದು ಗುರುತಿಸ್ಪಡುತ್ತದೆ. ಈ ಮಸೂದೆಗಳನ್ನು ಅಂಗೀಕರಿಸಿದ ವಿಧಾನವು ಪ್ರಜಾಪ್ರಭುತ್ವ ಪ್ರಕ್ರಿಯೆಗಳಿಗೆ ವಿರುದ್ಧವಾಗಿದೆ. ಇದರಿಂದ ಪ್ರಜಾಪ್ರಭುತ್ವದ ಹತ್ಯೆಯಾಗಿದೆ. 12 ವಿರೋಧ ಪಕ್ಷಗಳು ರಾಜ್ಯಸಭೆಯ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ' ಎಂದು ಸ್ಪಷ್ಟಪಡಿಸಿದ್ದಾರೆ.

ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ಬೆಲೆ ಖಾತರಿ ಮತ್ತು ಕೃಷಿ ಸೇವೆಗಳಿಗೆ ರೈತರ ಒಪ್ಪಿಗೆ (ಸಬಲೀಕರಣ ಮತ್ತು ರಕ್ಷಣೆ) ಮಸೂದೆಗಳನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.