ನವದೆಹಲಿ: ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಸೋಮವಾರ ಅಂಗೀಕರಿಸಲಾಯಿತು.
ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಸದಸ್ಯರ ಘೋಷಣೆಗಳ ನಡುವೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ‘ಕೃಷಿ ಕಾನೂನುಗಳ ರದ್ದತಿ ಮಸೂದೆ 2021‘ ಅನ್ನು ಮಂಡಿಸಿದರು.
ಈ ಮಸೂದೆ ಕುರಿತು ಚರ್ಚೆಯಾಗಲೇಬೇಕೆಂದು ವಿರೋಧ ಪಕ್ಷಗಳು ಪಟ್ಟುಹಿಡಿದವು. ವಿರೋಧ ಪಕ್ಷಗಳ ಸದಸ್ಯರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ತೀವ್ರ ಗದ್ದಲದ ವಾತಾವರಣ ಸೃಷ್ಟಿಯಾದ ಕಾರಣ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಮಧ್ಯಾಹ್ನ 2ವರೆಗೆ ಮುಂದೂಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.