
ಪ್ರಜಾವಾಣಿ ವಾರ್ತೆ
ತಿರುವನಂತಪುರ: ತನ್ನ ಜಮೀನಿನಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕೇರಳದ ರೈತರೊಬ್ಬರು ಭಾನುವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಣ್ಣೂರು ಜಿಲ್ಲೆ ಚೆರುಪುಜ್ಜದ ಅಂಬಟ್ಟು ಎಲಿಯಾಸ್ (62) ಮೃತ ರೈತ. ಅಂಬಟ್ಟು ಅವರು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಕೃಷಿಯಲ್ಲಿ ತೊಡಗಿಸಿಕೊಂಡಿದ್ದ ಅಂಬಟ್ಟು ಅವರು ಹಲವು ಪ್ರಶಸ್ತಿಗಳಿಗೂ ಭಾಜನರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.