ADVERTISEMENT

ಸರ್ಕಾರಿ ಭೂಮಿ ಅತಿಕ್ರಮಣ: ರೈತನಿಗೆ 2 ವರ್ಷ ಜೈಲು ಶಿಕ್ಷೆ

ಪಿಟಿಐ
Published 1 ಏಪ್ರಿಲ್ 2021, 8:00 IST
Last Updated 1 ಏಪ್ರಿಲ್ 2021, 8:00 IST
ಸಾಂದರ್ಭಿಕ ಚಿತ್ರ 
ಸಾಂದರ್ಭಿಕ ಚಿತ್ರ    

ಮುಜಾಫರ್‌ನಗರ: ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದಕ್ಕಾಗಿ ಉತ್ತರ ಪ್ರದೇಶದ ಮುಜಾಫರ್‌ನಗರದ ಸ್ಥಳಿಯ ನ್ಯಾಯಾಲಯವು ರೈತನಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ರೈತ ಸೋಹನ್‌ಬೀರ್ ಸಿಂಗ್ ಅವರು ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯ ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ತಪ್ಪಿತಸ್ಥರೆಂದು ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಸಂದೀಪ್ ಗುಪ್ತಾ ತೀರ್ಪು ನೀಡಿದ್ದಾರೆ.

ರೈತನಿಗೆ ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ₹ 10,000 ದಂಡ ವಿಧಿಸಲಾಗಿದೆ ಎಂದು ಸರ್ಕಾರಿ ವಕೀಲ ರಾಜೀವ್ ಶರ್ಮಾ ಹೇಳಿದ್ದಾರೆ.

ADVERTISEMENT

ಸೆಪ್ಟೆಂಬರ್ 25, 2013ರಂದು ಬೆಗ್ರಾಜ್‌ಪುರ ಗ್ರಾಮದಲ್ಲಿ ಸಾರ್ವಜನಿಕ ನೀರಿನ ಕಾಲುವೆಯ ಭೂಮಿ ಅತಿಕ್ರಮಣ ಆರೋಪದಡಿ ಕಂದಾಯ ಅಧಿಕಾರಿ ಸಂಜಯ್ ಕುಮಾರ್ ದೂರಿನ ಮೇಲೆ ಮನ್ಸೂರ್ ಪುರ್ ಪೊಲೀಸ್ ಠಾಣೆಯಲ್ಲಿ ರೈತನ ವಿರುದ್ದ ಪ್ರಕರಣ ದಾಖಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.