ADVERTISEMENT

'ದೆಹಲಿ ಚಲೊ': ಕೇಂದ್ರದೊಂದಿಗೆ ಮಾತುಕತೆಗೆ ನಿರಾಕರಿಸಿದ ರೈತ ಸಂಘಟನೆಗಳು

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 11:25 IST
Last Updated 29 ನವೆಂಬರ್ 2020, 11:25 IST
ನೂತನ ಕೃಷಿ ಕಾನೂನು ವಿರೋಧಿಸಿ ನವದೆಹಲಿಯ ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.
ನೂತನ ಕೃಷಿ ಕಾನೂನು ವಿರೋಧಿಸಿ ನವದೆಹಲಿಯ ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.   

ನವದೆಹಲಿ: ಸುಮಾರು 30 ರೈತ ಸಂಘಗಳ ಜಂಟಿ ವೇದಿಕೆಯು ಭಾನುವಾರ ಕೃಷಿ ಕಾನೂನುಗಳ ಕುರಿತಬಿಕ್ಕಟ್ಟು ಪರಿಹರಿಸಲು ಮಾತುಕತೆ ನಡೆಸುವ ಕೇಂದ್ರದ ಪ್ರಸ್ತಾಪವನ್ನು ತಿರಸ್ಕರಿಸಿವೆ. ಯಾವುದೇ ಪೂರ್ವ ಷರತ್ತುಗಳು ಇಲ್ಲದಿದ್ದಲ್ಲಿ ಮಾತ್ರ ಪ್ರತಿಭಟನಾನಿರತ ರೈತರು ಸರ್ಕಾರದೊಂದಿಗೆ ಮಾತುಕತೆಯಲ್ಲಿ ತೊಡಗಿಕೊಳ್ಳುತ್ತಾರೆ ಎಂದು ತಿಳಿಸಿವೆ.

'ದೆಹಲಿ ಚಲೊ' ಪ್ರತಿಭಟನಾ ಮೆರವಣಿಗೆ ನಡೆಸುತ್ತಿರುವ ರೈತರು ದೆಹಲಿಗೆ ಹೋಗುವ ರಸ್ತೆಗಳಲ್ಲಿ ಅನಿರ್ದಿಷ್ಟ ಧರಣಿಯನ್ನು ಪ್ರಾರಂಭಿಸಿರುವುದರಿಂದಾಗಿ ಸಾವಿರಾರು ರೈತರಿಗೆ ಪ್ರತಿಭಟನಾ ಸ್ಥಳದ ಸಮಸ್ಯೆ ಉಂಟಾಗಿಲ್ಲ ಎಂದು ಜಂಟಿ ವೇದಿಕೆ ತಿಳಿಸಿದೆ.

ಇದಕ್ಕೂ ಮುನ್ನ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, 'ಪ್ರತಿಭಟನಾನಿರತ ರೈತರ ಜೊತೆ ಮಾತುಕತೆ ನಡೆಸಲು ಭಾರತ ಸರ್ಕಾರ ಸಿದ್ಧವಿದೆ. ಈ ಬಗ್ಗೆ ಚರ್ಚೆ ನಡೆಸಲು ಕೇಂದ್ರ ಕೃಷಿ ಸಚಿವರು ಡಿಸೆಂಬರ್ 3ರಂದು ರೈತರನ್ನು ಆಹ್ವಾನಿಸಿದ್ದಾರೆ. ರೈತರ ಪ್ರತಿಯೊಂದು ಸಮಸ್ಯೆ ಮತ್ತು ಬೇಡಿಕೆಯನ್ನು ಸರ್ಕಾರ ಆಲಿಸಲಿದೆ' ಎಂದು ತಿಳಿಸಿದ್ದರು.

ADVERTISEMENT

ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಕಳೆದ ಕೆಲವು ವಾರಗಳಲ್ಲಿ ಪಂಜಾಬ್ ಮತ್ತು ಹರಿಯಾಣ ಮೂಲದ ಸಾವಿರಾರು ರೈತರು ಬೀದಿಗಿಳಿದಿದ್ದು, ಈ ಕಾನೂನುಗಳಿಂದಾಗಿ ಮಾರುಕಟ್ಟೆಯಲ್ಲಿ ರೈತರ ಗಳಿಕೆಯಾಗುತ್ತದೆ ಮತ್ತು ನಿಗಮಗಳಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಆರೋಪಿಸಿದ್ದಾರೆ.

ಶುಕ್ರವಾರ ಮಧ್ಯಾಹ್ನ, ಬುರಾರಿಯ ನಿರಂಕಾರಿ ಮೈದಾನದಲ್ಲಿ ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುವ ದೆಹಲಿ ಪೊಲೀಸರ ಪ್ರಸ್ತಾವವನ್ನು ರೈತರು ಒಪ್ಪಿಲ್ಲ. ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಚಲೋ ಆರಂಭಿಸಿರುವ ವಿವಿಧ ರೈತ ಸಂಘಟನೆಗಳ ಸಾವಿರಾರು ರೈತರು ದೆಹಲಿಯ ಸಿಂಘು ಗಡಿಯಲ್ಲಿ ಮೂರು ದಿನಗಳಿಂದ ಬೀಡುಬಿಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.