ADVERTISEMENT

ರೈತರಿಗೆ ಮೊಬೈಲ್‌: ಬಿಜೆಪಿ ಭರವಸೆ

ಜಾರ್ಖಂಡ್ ವಿಧಾನಸಭೆ ಚುನಾವಣೆ

ಪಿಟಿಐ
Published 27 ನವೆಂಬರ್ 2019, 19:13 IST
Last Updated 27 ನವೆಂಬರ್ 2019, 19:13 IST

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಬಿಜೆಪಿ, ಬುಧವಾರ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಕುಟುಂಬದಲ್ಲಿನ ಕನಿಷ್ಠ ಒಬ್ಬರಿಗೆ ಉದ್ಯೋಗ ಹಾಗೂ ರೈತರಿಗೆ ಮೊಬೈಲ್‌ ಹ್ಯಾಂಡ್‌ಸೆಟ್‌ ನೀಡಲಾಗುವುದು ಎಂದು ಭರವಸೆ ನೀಡಿದೆ.

ಹಿಂದುಳಿದ ಮತ್ತು ಬಡ ಕುಟುಂಬಗಳ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ಒದಗಿಸಲು ಪಕ್ಷವು ಇದೇ ಸಂದರ್ಭದಲ್ಲಿ ಭರವಸೆ ನೀಡಿದೆ.

ಜತೆಗೆ, 9 ಮತ್ತು 10ನೇ ತರಗತಿಯ ಪ್ರತಿಯೊಬ್ಬ ವಿದ್ಯಾರ್ಥಿ ₹2,200 ಮತ್ತು11 ಮತ್ತು 12ನೇ ತರಗತಿಯ ವಿದ್ಯಾರ್ಥಿ7,500 ವಿದ್ಯಾರ್ಥಿ ವೇತನ ಪಡೆಯಲಿದ್ದಾರೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ADVERTISEMENT

ರಾಜ್ಯದಲ್ಲಿ ಮತ್ತೆ ಸರ್ಕಾರ ರಚಿಸಿದರೆ ಸ್ಥಳೀಯ ಯುವಕರಿಗೆ ಉದ್ಯೋಗ ಸೃಷ್ಟಿಸಲಾಗುವುದು ಮತ್ತು ಸ್ವ ಸಹಾಯ ಗುಂಪುಗಳನ್ನು ನಡೆಸುವ ಬುಡಕಟ್ಟು ಮಹಿಳೆಯರಿಗೆ ₹5ಲಕ್ಷ ಸಾಲ ಒದಗಿಸಲಾಗುವುದು ಎಂದು ತಿಳಿಸಿದೆ.

ಸುಲಭ ಕಂತುಗಳಲ್ಲಿ ಮರುಪಾವತಿ ಮಾಡಲು ಅನುಕೂಲವಾಗುವಂತೆ ₹3ಲಕ್ಷವರೆಗೆ ರೈತರಿಗೆ ಸಾಲ ನೀಡಲಾಗುವುದು ಎಂದು ತಿಳಿಸಿದೆ.

ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ಅವರು ಪ್ರಣಾಳಿಕೆ ಬಿಡುಗಡೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.