ADVERTISEMENT

ಲಖೀಂಪುರ ಖೇರಿಗೆ ಅಧಿಕಾರಿಗಳ ಭೇಟಿ: ರೈತರ ಪ್ರತಿಭಟನೆ ಅಂತ್ಯ

ಪಿಟಿಐ
Published 20 ಆಗಸ್ಟ್ 2022, 13:06 IST
Last Updated 20 ಆಗಸ್ಟ್ 2022, 13:06 IST
ರಾಕೇಶ್‌ ಟಿಕಾಯತ್‌
ರಾಕೇಶ್‌ ಟಿಕಾಯತ್‌   

ಲಖೀಂಪುರ ಖೇರಿ, ಉತ್ತರ ಪ್ರದೇಶ: ಕೇಂದ್ರ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಅವರನ್ನು ವಜಾಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಇಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿರುವುದಾಗಿ ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ರಾಕೇಶ್‌ ಟಿಕಾಯತ್‌ ಶನಿವಾರ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳು ಪ್ರತಿಭಟನಕಾರರನ್ನು ಭೇಟಿಯಾಗಿ ಮನವಿ ಸ್ವೀಕರಿಸಿದ ಕಾರಣ ಪ್ರತಿಭಟನೆಯನ್ನು ನಿಲ್ಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಟಿಕಾಯತ್‌, ‘ದೆಹಲಿಯಲ್ಲಿ ಸೆಪ್ಟೆಂಬರ್‌ 6ರಂದು ನಡೆಯಲಿರುವ ಸಭೆಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದ್ದಾರೆ.

ADVERTISEMENT

ಸೆಪ್ಟೆಂಬರ್‌ ಮೊದಲ ವಾರದಲ್ಲಿ ರೈತರ ಜೊತೆ ಸಭೆ ನಡೆಸಲಾಗುವುದು ಎಂದು ಪ್ರತಿಭಟನಕಾರರಿಗೆ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.