ADVERTISEMENT

ಹೊಸ ಕೃಷಿ ಕಾಯ್ದೆಗಳ ಹಿಂಪಡೆಯುವ ತನಕ ಹೋರಾಟ ನಿಲ್ಲದು: ರಾಕೇಶ್‌ ಟಿಕಾಯತ್‌‌

ಪಿಟಿಐ
Published 7 ಮಾರ್ಚ್ 2021, 6:33 IST
Last Updated 7 ಮಾರ್ಚ್ 2021, 6:33 IST
ರಾಕೇಶ್‌ ಟಿಕಾಯತ್‌
ರಾಕೇಶ್‌ ಟಿಕಾಯತ್‌    

ಮುಜಾಫ್ಫರ್‌ನಗರ : ಕೃಷಿಗೆ ಸಂಬಂಧಿಸಿದ ಮೂರು ಹೊಸ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯುವ ತನಕ ಪ್ರತಿಭಟನೆ, ಹೋರಾಟ ಮುಂದುವರಿಯುತ್ತದೆ ಎಂದು ಭಾರತೀಯ ಕಿಸಾನ್ ಯೂನಿಯನ್‌ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕೇಂದ್ರ ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ಅವರು ರಾಮರಾಜ್ ಪಟ್ಟಣದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದರು.

ಸರ್ಕಾರ ರೈತರು ಈ ಬೇಡಿಕೆಗಳನ್ನು ಈಡೇರಿಸುವವರೆಗೆ ಆಂದೋಲನೆ ಮುಂದುವರಿಯುತ್ತದೆ ಎಂದು ಅವರು ಪುನರುಚ್ಚರಿಸಿದರು.

ADVERTISEMENT

ಟ್ರ್ಯಾಕ್ಟರ್ ರ್‍ಯಾಲಿಗೆ ಚಾಲನೆ ನೀಡಿದ ಅವರು, ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಿ, ಮಾರ್ಚ್ 27 ರಂದು ಗಾಜಿಪುರದ ರೈತರ ಪ್ರತಿಭಟನಾ ಸ್ಥಳವನ್ನು ತಲುಪಲಿದೆ ಎಂದರು.

ಏತನ್ಮಧ್ಯೆ, ಮುಜಾಫ್ಫರ್‌ನಗರ ಕ್ಷೇತ್ರದ ಸಂಸದರೂ ಆಗಿರುವ ಕೇಂದ್ರ ಸಚಿವ ಸಂಜೀವ್‌ ಬಾಲ್ಯನ್‌ ಅವರು, ಹೊಸ ಮೂರು ಕೃಷಿ ಕಾಯ್ದೆಗಳು ರೈತರಿಗೆ ಪ್ರಯೋಜನಕಾರಿಯಾಗಲಿವೆ. ಒಂದು ವೇಳೆ ಈ ಕಾಯ್ದೆಗಳಿಂದಾಗಿ ಒಬ್ಬ ರೈತ ಜಮೀನು ಕಳೆದುಕೊಂಡರೂ ನಾನು ಸಂಸತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.

ರೈತರ ಆಶಯಕ್ಕೆ ಅನುಗುಣವಾಗಿಯೇ ಈ ಕಾನೂನುಗಳನ್ನು ಜಾರಿಗೆ ತರಲಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.