ADVERTISEMENT

ಕೃಷಿ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ದೇಶದಾದ್ಯಂತ ನಡೆದ ಚಕ್ಕಾ ಜಾಮ್‌ ಅಂತ್ಯ

ಕೇಂದ್ರ ಸರ್ಕಾರದ ಮೂರು ಹೊಸ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ದೆಹಲಿ ಗಡಿ ಪ್ರದೇಶಗಳಲ್ಲಿ ಠಿಕಾಣಿ ಹೂಡಿರುವ ರೈತರು ಇಂದು ದೇಶವ್ಯಾಪಿ 'ಚಕ್ಕಾ ಜಾಮ್‌' ಪ್ರತಿಭಟನೆಗೆ ಕರೆ ನೀಡಿದ್ದಾರೆ. ಅದರಂತೆ ಇಂದು ಮಧ್ಯಾಹ್ನ 12 ರಿಂದ 3ರ ನಡುವೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳನ್ನು ಮೂರು ಗಂಟೆಗಳ ಕಾಲ ಬಂದ್ ಮಾಡಲು ರೈತರು ನಿರ್ಧರಿಸಿದ್ದಾರೆ. ಜನವರಿ 26 ಗಣರಾಜ್ಯೋತ್ಸವ ದಿನದಂದು ರೈತರು ನಡೆಸಿದ್ದ ಟ್ರ್ಯಾಕ್ಟರ್ ಪೆರೇಡ್‌, ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ದೆಹಲಿಯಲ್ಲಿ ರೈತರ ಸಂಚಾರವನ್ನು ತಡೆಯಲು ರಸ್ತೆಗಳಲ್ಲಿ ಮೊಳೆ, ಕಾಂಕ್ರೀಟ್ ಬ್ಯಾರಿಕೇಡ್ ಹಾಗೂ ತಂತಿಗಳನ್ನು ಸ್ಥಾಪಿಸಲಾಗಿದೆ. ಗಾಜಿಪುರ, ಟಿಕ್ರಿ ಹಾಗೂ ಸಿಂಘು ಗಡಿಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 17:42 IST
Last Updated 6 ಫೆಬ್ರುವರಿ 2021, 17:42 IST

ದೆಹಲಿ ಗಡಿಯಲ್ಲಿ ಭದ್ರತೆ ಮುಂದುವರಿಕೆ

ಚಕ್ಕಾ ಜಾಮ್‌ ಅಂತ್ಯ

ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ರೈತರು ಇಂದು ದೇಶದಾದ್ಯಂತ ನಡೆದ ಚಕ್ಕಾ ಜಾಮ್‌ ಅಂತ್ಯವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಹೊರ ವಲಯದಲ್ಲಿ ನಿಯೋಜಿಸಲಾಗಿರುವ ಭದ್ರತೆ ಇನ್ನೂ ಮುಂದುವರಿದಿದೆ. 

ಕಲ್ಬುರ್ಗಿ–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ರೈತರ ಪ್ರತಿಭಟನೆ

ರೈತರಿಂದ ಚಕ್ಕಾ ಜಾಮ್‌: ದೆಹಲಿಯ ಗಡಿಗಳಲ್ಲಿ ಮತ್ತೆ ಇಂಟರ್ನೆಟ್‌ ಸ್ಥಗಿತ

ನವದೆಹಲಿ: ಕೃಷಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿಯ ಗಡಿ ಪ್ರದೇಶಗಳಲ್ಲಿ ಇಂಟರ್ನೆಟ್‌ ಸೇವೆಯನ್ನು ಮತ್ತೊಮ್ಮೆ ಕಡಿತಗೊಳಿಸಲಾಗಿದೆ. 

ರೈತರು ದೇಶದಾದ್ಯಂತ 'ಚಕ್ಕಾ ಜಾಮ್‌' ಪ್ರತಿಭಟನೆ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು (ಫೆಬ್ರುವರಿ 06) ರಾತ್ರಿ 11:59 ಗಂಟೆ ವರೆಗೂ ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

ADVERTISEMENT

ರೈತರ ಹೋರಾಟದ ಹಿಂದೆ 'ಅಂತರರಾಷ್ಟ್ರೀಯ ಪಿತೂರಿ' ಆರೋಪಕ್ಕೆ‌ ಟಿಕಾಯತ್‌ ಆಕ್ರೋಶ

ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಹೋರಾಟದ ಹಿಂದೆ ಅಂತರರಾಷ್ಟ್ರೀಯ ಪಿತೂರಿ ಇದೆ ಎಂಬ ಆರೋಪವನ್ನು ರೈತ ನಾಯಕ ರಾಕೇಶ್‌ ಟಿಕಾಯತ್‌ ಸಂಪೂರ್ಣವಾಗಿ ಅಲ್ಲಗಳೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ. 

ಈ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಟಿಕಾಯತ್‌, 'ಯಾವ ಅಂತರರಾಷ್ಟ್ರೀಯ ಪಿತೂರಿ? ಯಾವ ಮಾನಹಾನಿ? ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ಬೆಲೆ ಕೇಳುತ್ತಿದ್ದಾರೆ. ಇದು ಭಾರತಕ್ಕೆ ಕೆಟ್ಟ ಹೆಸರು ತಂದಂತೆ ಆಗುತ್ತದೆಯೇ? ಬೆಂಬಲ ಬೆಲೆ ಕಾಯ್ದೆ ಇದ್ದರೆ ಮಾತ್ರ ರೈತರ ಬೆಳೆಗೆ ಸರಿಯಾದ ಬೆಲೆ ಸಿಗುತ್ತದೆ. ಬೆಂಬಲ ಬೆಲೆ ಪ್ರಕ್ರಿಯೆ ಇಲ್ಲದಿರುವುದೇ ಒಂದು ದೊಡ್ಡ ಪಿತೂರಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತುಮಕೂರಿನಲ್ಲಿ ಚಕ್ಕಾ ಜಾಮ್ ಪ್ರತಿಭಟನೆ

ಮಂಗಳೂರು–ಬೆಂಗಳೂರು ಹೆದ್ದಾರಿ ತಡೆದು ಪ್ರತಿಭಟನೆ

ಹಾಸನ: ಕೇಂದ್ರ ಸರ್ಕಾರ  ಕೃಷಿ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಒತ್ತಾಯಿಸಿ  ರೈತ, ದಲಿತ, ಕಾರ್ಮಿಕ ಸಂಘಟನೆ ಸದಸ್ಯರು ಶನಿವಾರ ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.‌

ಹೊಸಪೇಟೆ-ಕಂಪ್ಲಿ‌ ಹೆದ್ದಾರಿಯಲ್ಲಿ ಪ್ರತಿಭಟನೆ

ಹೊಸಪೇಟೆ-ಕಂಪ್ಲಿ‌ ಹೆದ್ದಾರಿಯಲ್ಲಿ ರೈತರು ರಸ್ತೆತಡೆ ಚಳವಳಿ‌ ನಡೆಸುತ್ತಿದ್ದಾರೆ.

ಪ್ರತಿಭಟನಕಾರರ ಬಂಧನ

ಮೈಸೂರಿನ ಬೆಂಗಳೂರು ನೀಲಗಿರಿ ರಸ್ತೆ ತಡೆದು ಐಕ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೆ ಅಡುಗೆ ಮಾಡಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿದರು‌.

ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ ಕಲಬುರ್ಗಿ ನಗರದಲ್ಲಿ ಶನಿವಾರ ಹೆದ್ದಾರಿ ತಡೆ ನಡೆಸಿದ ರೈತರು...

ಬಳ್ಳಾರಿಯಲ್ಲಿ ರೈತರ ಪ್ರತಿಭಟನೆ

ದೆಹಲಿ–ಉತ್ತರ ಪ್ರದೇಶದ ಘಾಜಿಪುರ ಗಡಿಯಲ್ಲಿ ಬಿಗಿ ಭದ್ರತೆ

PHOTOS: ರಾಜ್ಯದಲ್ಲಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿದ ರೈತರು

ಕಲಬುರ್ಗಿಯಲ್ಲಿ ಪ್ರತಿಭಟನೆ; ನೇರ ಪ್ರಸಾರ

ಜನರಿಗೆ ತೊಂದರೆ ಆಗದಂತೆ ವ್ಯವಸ್ಥೆ– ಬೊಮ್ಮಾಯಿ

ಬೆಂಗಳೂರು: ‘ರೈತರು ಪ್ರತಿಭಟನೆ ಹಮ್ಮಿಕೊಂಡಿರುವುದರಿಂದ, ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ತುಮಕೂರಿನಲ್ಲಿ ಬಂಧನದ ವೇಳೆ ಪೊಲೀಸರು ಮತ್ತು ರೈತರ ಚಕಮಕಿ

ಕೃಷಿ ಕಾನೂನುಗಳನ್ನು ವಿರೋಧಿಸಿ ಮಂಡ್ಯದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿರುವ ರೈತರು ಆಂಬುಲೆನ್ಸ್‌ಗೆ ದಾರಿ ಬಿಟ್ಟುಕೊಟ್ಟರು.

ರೈತರಿಂದ ಹುಬ್ಬಳ್ಳಿ-ಕಲಬುರ್ಗಿ ರಾಷ್ಟ್ರೀಯ ಹೆದ್ದಾರಿ ತಡೆ

ಬೆಳಗಾವಿ ಜಿಲ್ಲೆಯ ನಿಚ್ಚಣಕಿ ರೈತರಿಂದ ರಸ್ತಾರೋಕೋ, ಕಿತ್ತೂರು, ತಡಕೋಡ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರಯಾಣಿಕರು ಮತ್ತು ರೈತ ಸಂಘಟನೆ ಕಾರ್ಯಕರ್ತರ ಮಧ್ಯ ಮಾತಿನ ಚಕಮಕಿ ನಡೆಯಿತು.

ಚಿಕ್ಕಮಗಳೂರಿನಲ್ಲಿ ರೈತರ ಪ್ರತಿಭಟನೆ

ಹುನಗುಂದ: ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದ ರೈತರು

ಕೃಷಿ, ಎಪಿಎಂಸಿ, ವಿದ್ಯುತ್ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕುರುಕೋಡು ತಾಲ್ಲೂಕು ಕೋಳೂರು ಕ್ರಾಸ್ ಬಳಿ ರೈತ ಸಂಘಟನೆಗಳ ಮುಖಂಡರು ಶ್ರೀರಂಗಪಟ್ಟಣ ಬೀದರ್ ರಾಜ್ಯ ಹೆದ್ದಾರಿ ತಡೆನಡೆಸಿದರು.

ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಕೇಂದ್ರ ಸರ್ಕಾರದ ವಿರುದ್ದ ಅಕ್ರೋಶ ವ್ಯಕ್ತಪಡಿಸಿದರು.

ಹುನಗುಂದ: ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ಆರಂಭಿಸಿದ ರೈತರು

ಬಾಗಲಕೋಟೆ: ಕೇಂದ್ರದ ಮೂರು ಕೃಷಿ ಕಾಯ್ದೆಗಳ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ  ಹಿನ್ನೆಲೆಯಲ್ಲಿ ಹುನಗುಂದ ಪಟ್ಟಣದಲ್ಲಿ ಶನಿವಾರ ರೈತ ಸಂಘದ ನೇತೃತ್ವದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ಆರಂಭಿಸಲಾಗಿದೆ.

ಹುನಗುಂದ ಪಟ್ಟಣದ ಹೊರ ವಲಯದಲ್ಲಿರುವ ಚಿತ್ರದುರ್ಗ-ಸೊಲ್ಲಾಪುರ  ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಜಮಾಯಿಸಿರುವ ರೈತರು ಪ್ರತಿಭಟನೆ ಆರಂಭಿಸಿದ್ದಾರೆ. 
 

ದೆಹಲಿಯಲ್ಲಿ ರೈತರ ಮುಷ್ಕರವನ್ನು ಬೆಂಬಲಿಸಿ ಬಳ್ಳಾರಿ ಯಲ್ಲಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರೈತ ಸಂಘದ ಕಾರ್ಯಕರ್ತರು ಶನಿವಾರ ಚಾಮರಾಜನಗರ ದಲ್ಲಿ ರಸ್ತೆ ತಡೆ ನಡೆಸಿದರು.

‘ದೆಹಲಿ, ಉ.ಪ್ರದೇಶ, ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ಇರುವುದಿಲ್ಲ’

ಕರ್ನಾಟಕದಲ್ಲಿ ಇಂದು ಎಲ್ಲೆಲ್ಲಿ ಹೆದ್ದಾರಿ ಬಂದ್‌?

ಟೂಲ್ ಕಿಟ್ ದಾಖಲೆಯ ಹಿಂದೆ ‘ಪೊಯೆಟಿಕ್ ಜಸ್ಟೀಸ್ ಫೌಂಡೇಶನ್’ ಕೈವಾಡ?

ಹಿರೇಬಾಗೇವಾಡಿ ಟೋಲ್‌ ಬಳಿ ರೈತರಿಂದ ಹೆದ್ದಾರಿ ತಡೆ

ಬೆಳಗಾವಿ: ನೂತನ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಚಳವಳಿ ಬೆಂಬಲಿಸಿ ಭಾರತೀಯ ಕೃಷಿಕ ಸಮಾಜ, ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳವರು ಇಂದು ಹೆದ್ದಾರಿ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕಾನೂನು ಮೀರಿದರೆ ಕಠಿಣ ಕ್ರಮಕ್ಕೆ ಸರ್ಕಾರದ ಸೂಚನೆ

ದೆಹಲಿಯಲ್ಲಿ ಭದ್ರತೆಗೆ 50 ಸಾವಿರ ರಕ್ಷಣಾ ಸಿಬ್ಬಂದಿ ನಿಯೋಜನೆ

ರೈತರ ಚಕ್ಕಾ ಜಾಮ್‌ ಪ್ರತಿಭಟನೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ 50 ಸಾವಿರ ಭದ್ರತಾ ಸಿಬ್ಬಂದಿಯನ್ನು ದೆಹಲಿಯಲ್ಲಿ ನಿಯೋಜಿಸಲಾಗಿದೆ.

ಪರಿಸ್ಥಿತಿಯ ಮೇಲ್ವಿಚಾರಣೆಗಾಗಿ ಡ್ರೋನ್ ಕ್ಯಾಮೆರಾಗಳನ್ನೂ ನಿಯೋಜಿಸಲಾಗಿದೆ.

ದೆಹಲಿ, ಉ.ಪ್ರದೇಶ, ಉತ್ತರಾಖಂಡದಲ್ಲಿ 'ಚಕ್ಕಾ ಜಾಮ್' ಇರುವುದಿಲ್ಲ: ರೈತ ಮುಖಂಡರು

ಫೆಬ್ರವರಿ 6 ಶನಿವಾರದಂದು (ಇಂದು) ನಡೆಯಲಿರುವ ದೇಶವ್ಯಾಪ್ತಿ ಚಕ್ಕಾ ಜಾಮ್ (ರಸ್ತೆ ದಿಗ್ಬಂಧನ) ಪ್ರತಿಭಟನೆಯಿಂದ ರಾಷ್ಟ್ರ ರಾಜಧಾನಿ ನವದೆಹಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡ ರಾಜ್ಯಗಳನ್ನು ಹೊರತುಪಡಿಸಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಸಂಪೂರ್ಣ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.