ADVERTISEMENT

ಲಖಿಂಪುರ ಖೇರಿ ಹಿಂಸಾಚಾರ: ರೈತರಿಗೆ ನ್ಯಾಯ ದೊರೆಯುವ ಭರವಸೆ ಇದೆ ಎಂದ ಟಿಕಾಯತ್

ಪಿಟಿಐ
Published 18 ಏಪ್ರಿಲ್ 2022, 10:28 IST
Last Updated 18 ಏಪ್ರಿಲ್ 2022, 10:28 IST
ರಾಕೇಶ್ ಟಿಕಾಯತ್
ರಾಕೇಶ್ ಟಿಕಾಯತ್    

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಮಂಜೂರಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ರದ್ದುಪಡಿಸಿರುವುದು ರೈತರಲ್ಲಿ ನ್ಯಾಯ ದೊರೆಯುವ ಭರವಸೆ ಮೂಡಿಸಿದೆ ಎಂದು ಬಿಕೆಯು ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಉತ್ತರ ಪ್ರದೇಶ ಸರ್ಕಾರ ಈಗ ನೊಂದ ರೈತರಿಗೆ ಭದ್ರತೆ, ಪರಿಹಾರ ಮತ್ತು ನ್ಯಾಯ ಒದಗಿಸುವ ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.

‘ಆಶಿಶ್ ಮಿಶ್ರಾ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿರುವುದು ರೈತರಲ್ಲಿ ಆಶಾವಾದ ಮೂಡಿಸಿದೆ. ಉತ್ತರ ಪ್ರದೇಶ ಸರ್ಕಾರವೀಗ ನೊಂದ ರೈತರ ಪರ ಕೆಲಸ ಮಾಡಬೇಕು. ಮುಗ್ದ ರೈತರನ್ನು ಜೈಲುಗಳಿಂದ ಬಿಡುಗಡೆ ಮಾಡಬೇಕು. ಪೂರ್ತಿ ನ್ಯಾಯ ದೊರೆಯುವವರೆಗೆ ಹೋರಾಟ ಮುಂದುವರಿಯಲಿದೆ’ ಎಂದು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್‌ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿತ್ತು. ಇದನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಮಿಶ್ರಾ ಅವರನ್ನು ಪೊಲೀಸರ ವಶಕ್ಕೆ ಒಪ್ಪಿಸಿಕೊಳ್ಳುವಂತೆ ಸೂಚಿಸಿದೆ. ಜತೆಗೆ, ಪ್ರಕರಣದ ವಿಚಾರಣೆಯನ್ನು ಪುನಃ ಆರಂಭಿಸುವಂತೆ ಅಲಹಾಬಾದ್‌ ಹೈಕೋರ್ಟ್‌ಗೆ ನಿರ್ದೇಶಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.