ADVERTISEMENT

PHOTOS | ರೈತರ ಹೋರಾಟಕ್ಕೆ ಗೆಲುವು; ನೆನಪುಗಳೊಂದಿಗೆ ಊರಿನತ್ತ ಹೆಜ್ಜೆ

ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರವು, ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವುದಾಗಿ ರೈತರಿಗೆ ಭರವಸೆ ನೀಡಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂಪಡೆದಿರುವ ರೈತರು ಹೋರಾಟದ ನೆನಪುಗಳೊಂದಿಗೆ ಊರಿನತ್ತ ಹೆಜ್ಜೆ ಹಾಕಿದರು.(ಚಿತ್ರಕೃಪೆ: ಪಿಟಿಐ, ಎಎಫ್‌ಪಿ, ಐಎಎನ್‌ಎಸ್)

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2021, 16:12 IST
Last Updated 11 ಡಿಸೆಂಬರ್ 2021, 16:12 IST
ಪ್ರತಿಭಟನೆ ಹಿಂಪಡೆದ ರೈತರ ವಿಜಯೋತ್ಸವ
ಪ್ರತಿಭಟನೆ ಹಿಂಪಡೆದ ರೈತರ ವಿಜಯೋತ್ಸವ   
ಒಂದು ವರ್ಷಕ್ಕೂ ಅಧಿಕ ಕಾಲದಿಂದ ದೆಹಲಿ ಗಡಿ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ ರೈತರು
ಸಿಂಘು, ಟಿಕ್ರಿ, ಘಾಜಿಪುರ ಬಳಿ ಬೀಡು ಬಿಟ್ಟಿದ್ದ ರೈತರು
ಹೋರಾಟದ ಸ್ಥಳದಲ್ಲಿ ಹೆದ್ದಾರಿಗಳಿಗೆ ಹಾಕಿದ್ದ ತಡೆಗಳನ್ನು ತೆರವುಗೊಳಿಸಿದ್ದಾರೆ.
ರೈತರು ಕುಟುಂಬ ಸಮೇತ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಹೋರಾಟದ ನೆನಪುಗಳೊಂದಿಗೆ ಊರುಗಳತ್ತ ಹೆಜ್ಜೆ
ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳ ರೈತರು ಹೋರಾಟದಲ್ಲಿ ಭಾಗವಹಿಸಿದ್ದರು.
ಹೋರಾಟದ ನೆಲವನ್ನು ತೊರೆಯುವಾಗ ರೈತರು ಭಾವುಕರಾಗಿದ್ದೂ ಕಂಡುಬಂತು.
ರೈತರು ಡಿ. 11 ಅನ್ನು ವಿಜಯ ದಿನವೆಂದು ಆಚರಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.