ADVERTISEMENT

ಪ್ರತಿಭಟನೆ ಹಿಂದಕ್ಕೆ: ನಿರ್ಧಾರ ಕೈಗೊಳ್ಳಲು ರೈತರ ಸಭೆ ಇಂದು

ಪಿಟಿಐ
Published 7 ಡಿಸೆಂಬರ್ 2021, 19:33 IST
Last Updated 7 ಡಿಸೆಂಬರ್ 2021, 19:33 IST
   

ನವದೆಹಲಿ: ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವಪ್ರತಿಭಟನೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವದ ಬಗ್ಗೆ ಬುಧವಾರ ಮಧ್ಯಾಹ್ನ 2 ಗಂಟೆಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ (ಎಸ್‌ಕೆಎಂ) ಹೇಳಿದೆ.

ಪ್ರತಿಭಟನೆ ಕೈಬಿಡಲು ಸರ್ಕಾರವು ಪ್ರಸ್ತಾವ ಮುಂದಿಟ್ಟಿದೆ. ಎಸ್‌ಕೆಎಂ ಸದಸ್ಯರು ಅದರ ಬಗ್ಗೆ ಚರ್ಚಿಸಿದ್ದಾರೆ ಎಂದು ರೈತ ಮುಖಂಡ ಬಲಬೀರ್ ಸಿಂಗ್‌ ರಾಜೇವಾಲ್‌ ತಿಳಿಸಿದ್ದಾರೆ.

‘ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಬಗ್ಗೆ ಪರಿಶೀಲಿಸಲು ಸಮಿತಿ ರಚಿಸುವುದಾಗಿ ಸರ್ಕಾರ ಹೇಳಿದೆ.
ಇದನ್ನು ಎಸ್‌ಕೆಎಂ ವಿರೋಧಿಸಿದೆ’ ಎಂದು ರಾಜೇವಾಲ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.