ADVERTISEMENT

ರೈತರು ಹಕ್ಕು ಕೇಳುತ್ತಿದ್ದಾರೆಯೇ ವಿನಾ ಉಚಿತ ಉಡುಗೊರೆಯಲ್ಲ: ರಾಹುಲ್ ಗಾಂಧಿ

ರೈತರಪರ ನಿಂತ ಕಾಂಗ್ರೆಸ್ ಅಧ್ಯಕ್ಷ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2018, 12:58 IST
Last Updated 30 ನವೆಂಬರ್ 2018, 12:58 IST
   

ನವದೆಹಲಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಲ್ಲಿನ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾ ನಿರತರಾಗಿರುವ ಸಾವಿರಾರು ರೈತರಿಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬೆಂಬಲ ನೀಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಪ್ರತಿಭಟನೆ 2ನೇ ದಿನಕ್ಕೆ ಕಾಲಿಟ್ಟಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ನ್ಯಾಷನಲ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದಮುಖಂಡ ಫರೂಕ್ ಅಬ್ದುಲ್ಲಾ ಮತ್ತು ಲೋಕತಾಂತ್ರಿಕ ಜನತಾದಳ (ಎಲ್‌ಜೆಡಿ) ಮುಖಂಡ ಶರದ್ ಯಾದವ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.

ಪ್ರತಿಭಟನಾ ರ‍್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್, ‘ರೈತರು ಉಚಿತ ಉಡುಗೊರೆಗಳನ್ನುಕೇಳುತ್ತಿಲ್ಲ. ಅವರು ತಮ್ಮ ಹಕ್ಕನ್ನು ಕೇಳುತ್ತಿದ್ದಾರೆ ಎಂದು ಹೇಳಿದ್ದು,ನಿಮ್ಮ ಶಕ್ತಿಯಿಂದಲೇನಮ್ಮದೇಶ ನಿರ್ಮಾಣವಾಗಿದೆ. ಹಾಗಾಗಿರೈತರೇ ಹೆದರಬೇಡಿ. ನಿಮ್ಮ ಜೊತೆನಾವಿದ್ದೇವೆ’ ಎಂಬ ಭರವಸೆ ನೀಡಿದರು.

ADVERTISEMENT

ಅಲ್ಲದೇ ರಾಷ್ಟ್ರದ 15 ಮಂದಿ ಶ್ರೀಮಂತರ ₹3.5 ಲಕ್ಷ ಕೋಟಿ ಸಾಲಮನ್ನಾ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ಬಡ ರೈತರ ಸಾಲಮನ್ನಾ ಮಾಡಲು ಏಕೆ ಮುಂದಾಗುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ರಾಷ್ಟ್ರದ ರೈತರು ಸಂಕಷ್ಟದಲ್ಲಿದ್ದಾರೆ. ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕಾಗಿದೆ. ಇಲ್ಲದಿದ್ದಲ್ಲಿ2019ರ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.