ADVERTISEMENT

ರೈತರ ಪ್ರತಿಭಟನೆ: ದೆಹಲಿ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ

ಪಿಟಿಐ
Published 13 ಡಿಸೆಂಬರ್ 2020, 6:52 IST
Last Updated 13 ಡಿಸೆಂಬರ್ 2020, 6:52 IST
ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣ –ರಾಜಸ್ಥಾನ್ ಗಡಿ ಭಾಗದಲ್ಲಿ ಹೆದ್ದಾರಿಯಲ್ಲಿ ಭದ್ರತೆ ನಿಯೋಜನೆಗೊಂಡಿರುವ ಪೊಲೀಸರು.
ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹರಿಯಾಣ –ರಾಜಸ್ಥಾನ್ ಗಡಿ ಭಾಗದಲ್ಲಿ ಹೆದ್ದಾರಿಯಲ್ಲಿ ಭದ್ರತೆ ನಿಯೋಜನೆಗೊಂಡಿರುವ ಪೊಲೀಸರು.   

ನವದೆಹಲಿ: ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೃಹತ್ ಪ್ರತಿಭಟನೆ ನಡೆಸುತ್ತಿರುವ ರೈತರು ಜೈಪುರ –ದೆಹಲಿ ರಾಷ್ಟ್ರೀಯ ಹೆದ್ದಾರಿ ಬಂದ್‌ ಮಾಡುವ ಯೋಜನೆ ರೂಪಿಸಿದ್ದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ದೆಹಲಿ ಮತ್ತು ಹರಿಯಾಣದ ಎಲ್ಲ ಗಡಿಭಾಗಗಳ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

ದೆಹಲಿ ಪ್ರಮುಖ ಗಡಿ ಭಾಗದ ಪ್ರಮುಖ ಸ್ಥಳಗಳಲ್ಲಿ ಶನಿವಾರ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವ ಮೂಲಕ ಭದ್ರತೆಯನ್ನು ಹೆಚ್ಚಿಸಲಾಯಿತು. ಇದೇ ವೇಳೆ ಹೆದ್ದಾರಿಯಲ್ಲಿ ಸಾಗಲಿರುವ ಪ್ರಯಾಣಿಕರ ವಾಹನಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರವಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಜೈಪುರ್‌ – ದೆಹಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡುತ್ತೇವೆ‘ ಎಂಬ ರೈತರ ಘೋಷಣೆಯ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಗುರುಗ್ರಾಮಕ್ಕೆ ಹೋಗುವ ಈ ಹೆದ್ದಾರಿಯಲ್ಲಿ ಹೆಚ್ಚಿನ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

ADVERTISEMENT

ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ 17 ದಿನಗಳಿಂದ ದೆಹಲಿಯ ಸಿಂಘು, ಟಿಕ್ರಿ ಸೇರಿದಂತೆ ವಿವಿಧ ಗಡಿಭಾಗಗಳಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.