ADVERTISEMENT

ಕೇಂದ್ರ ಸರ್ಕಾರದಿಂದ ರೈತರ ಮೇಲೆ ದೌರ್ಜನ್ಯ: ರಾಹುಲ್ ಗಾಂಧಿ

ಏಜೆನ್ಸೀಸ್
Published 6 ಮಾರ್ಚ್ 2021, 7:20 IST
Last Updated 6 ಮಾರ್ಚ್ 2021, 7:20 IST
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ   

ನವದೆಹಲಿ: ವಿವಾದಿತ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ.

ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ರೈತರ ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯವೆಸಗುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ದೇಶದ ಗಡಿಯಲ್ಲಿ ಅವರ (ರೈತರ) ಮಕ್ಕಳು ಪ್ರಾಣವನ್ನೇ ಪಣಕ್ಕಿಟ್ಟು ಗಡಿ ಕಾಯುತ್ತಿದ್ದಾರೆ. ಅತ್ತ ದೆಹಲಿ ಗಡಿಯಲ್ಲಿ ಮೊಳೆಯನ್ನು ಹಾಕಲಾಗಿದೆ. ಅನ್ನದಾತರು ತಮ್ಮ ಹಕ್ಕಿಗಾಗಿ ಹೋರಾಡುತ್ತಿದ್ದಾರೆ. ಸರ್ಕಾರವು ಅವರ ಮೇಲೆ ದೌರ್ಜನ್ಯವನ್ನು ಎಸಗುತ್ತಿದೆ ಎಂದು ಟೀಕಿಸಿದರು.

ADVERTISEMENT

ಜನವರಿ 26 ಗಣರಾಜ್ಯೋತ್ಸವದ ದಿನದಂದು ನಡೆದ ಟ್ರ್ಯಾಕ್ಟರ್ ಪೆರೇಡ್ ಹಿಂಸಾಚಾರದ ಬಳಿಕ ದೆಹಲಿ ಗಡಿಗಳಲ್ಲಿ ರೈತರು ಪ್ರತಿಭಟನಾ ನಡೆಸುತ್ತಿರುವ ಪ್ರದೇಶಗಳಲ್ಲಿ ಪೊಲೀಸ್ ಬ್ಯಾರಿಕೇಡ್‌ಗಳನ್ನು ಸ್ಥಾಪಿಸಿ ರಸ್ತೆಗಳಲ್ಲಿ ಮೊಳೆ ಹಾಗೂ ಮುಳ್ಳು ತಂತಿಗಳನ್ನು ಲಗತ್ತಿಸಿತ್ತು.

ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ರೈತರು ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ 100ನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರದಂದು ದೆಹಲಿ ಹೊರವಲಯದಲ್ಲಿ ಹೆದ್ದಾರಿಯಲ್ಲಿ ಐದು ತಾಸುಗಳ ರಸ್ತೆ ತಡೆ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.