ADVERTISEMENT

ಕಾಂಗ್ರೆಸ್ ರೈತರನ್ನು ಹಾದಿ ತಪ್ಪಿಸುತ್ತಿದೆ: ನರೇಂದ್ರ ಸಿಂಗ್ ತೋಮರ್

ಏಜೆನ್ಸೀಸ್
Published 10 ಫೆಬ್ರುವರಿ 2021, 9:55 IST
Last Updated 10 ಫೆಬ್ರುವರಿ 2021, 9:55 IST
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್   

ನವದೆಹಲಿ: ಹೊಸ ಕೃಷಿ ಕಾಯ್ದೆಗಳ ಕುರಿತು ಸುಳ್ಳುಗಳನ್ನು ಹೇಳುವ ಮೂಲಕ ಕಾಂಗ್ರೆಸ್ ಪಕ್ಷವು ರೈತರನ್ನು ಹಾದಿ ತಪ್ಪಿಸುತ್ತಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ ಆರೋಪಿಸಿದ್ದಾರೆ.

ಕಾಂಗ್ರೆಸ್ ತನ್ನ ನೆಲೆಯನ್ನೇ ಕಳೆದುಕೊಳ್ಳುತ್ತಿದೆ. ಹೀಗಾಗಿ ಈ ಕೆಟ್ಟ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರೈತರ ಹಿತದೃಷ್ಟಿಯಿಂದ ಕೃಷಿ ಕಾಯ್ದೆಯಲ್ಲಿ ಸುಧಾರಣೆಗಳನ್ನು ತರಲಾಗಿದೆ. ಆದರೆ ತನ್ನ ನೆಲೆಯನ್ನುಕಳೆದುಕೊಂಡಿರುವ ಕಾಂಗ್ರೆಸ್ ಒಂದರ ಬಳಿಕ ಒಂದರಂತೆ ಸುಳ್ಳುಗಳನ್ನು ಹೇಳುವ ಮೂಲಕ ದೇಶದ ಜನರ ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪ ಮಾಡಿದರು.

ADVERTISEMENT

ನೂತನ ಕೃಷಿ ಕಾಯ್ದೆಗೆ ಸಂಬಂಧಪಟ್ಟಂತೆ ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರು ಸುಳ್ಳುಗಳನ್ನು ಹೇಳುತ್ತಿದ್ದಾರೆ. ಕಾಂಗ್ರೆಸ್ ಸಂಸದ ರವನೀತ್ ಸಿಂಗ್ ಮತ್ತೆ ಹಾದಿ ತಪ್ಪಿಸುವ ಪ್ರಯತ್ನ ಮಾಡಿದರು. ಆದರೆ ಸಚಿವ ಅನುರಾಗ್ ಠಾಕೂರ್ ಅವರ ಸುಳ್ಳನ್ನು ಬಯಲು ಮಾಡಿದರು ಎಂದು ತಿಳಿಸಿದರು.

ಕಳೆದ ಎರಡು ತಿಂಗಳಿಂದ ಹೊಸ ಕೃಷಿ ಕಾಯ್ದೆಗಳಲ್ಲಿರುವ ನ್ಯೂನತೆಗಳ್ನು ತಿಳಿಸುವಂತೆ ಕೇಳುತ್ತಿದ್ದೇನೆ. ಅದನ್ನು ಸರಿಪಡಿಸಬೇಕೇ ಹೇಳಿ. ಆದರೆ ಕೃಷಿ ಕಾಯ್ದೆಯನ್ನು ವಿರೋಧ ಪಕ್ಷದ ನಾಯಕರು ಟೀಕಿಸುತ್ತಾರೆ. ಆದರೆ ಅದು ಹೇಗೆ ರೈತರಿಗೆ ಹಾನಿ ಮಾಡುತ್ತಿದೆ ಎಂಬುದನ್ನು ವಿವರಿಸುವ ಪ್ರಯತ್ನ ಯಾರೂ ಮಾಡಲಿಲ್ಲ ಎಂದು ಟೀಕಿಸಿದರು.

ಕೇಂದ್ರ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿ ಗಡಿಯಲ್ಲಿ ರೈತರು ನವೆಂಬರ್ 26ರಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರದ ಜೊತೆಗೆ 11 ಸುತ್ತಿನ ಮಾತುಕತೆ ನಡೆಸಿದರೂ ಇದುವರೆಗೆ ಬಿಕ್ಕಟ್ಟು ಇತ್ಯರ್ಥಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.