ADVERTISEMENT

ರೈತರ ಪ್ರತಿಭಟನೆ: ಲುಕ್‌ಔಟ್‌ ಸುತ್ತೋಲೆ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ಪಿಟಿಐ
Published 11 ಫೆಬ್ರುವರಿ 2025, 14:00 IST
Last Updated 11 ಫೆಬ್ರುವರಿ 2025, 14:00 IST
ದೆಹಲಿ ಹೈಕೋರ್ಟ್
ದೆಹಲಿ ಹೈಕೋರ್ಟ್   

ನವದೆಹಲಿ: 2021ರಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಹೊರಡಿಸಲಾದ ಲುಕ್‌ಔಟ್‌ ಸುತ್ತೋಲೆಯನ್ನು (ಎಲ್‌ಒಸಿ) ವಜಾಗೊಳಿಸಿರುವ ದೆಹಲಿ ಹೈಕೋರ್ಟ್‌, ಇಬ್ಬರೂ ತನಿಖೆಗೆ ಪೂರ್ಣ ಸಹಕಾರ ನೀಡುತ್ತಿದ್ದಾರೆ ಎಂದು ತಿಳಿಸಿದೆ.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜೀವ್‌ ನರುಲಾ ಅವರು, ‘ತಿಲಕಶ್ರೀ ಕೃಪಾನಂದ್‌ ಹಾಗೂ ಶಂತನು ಮುಲುಕ್‌ ವಿರುದ್ಧ ಲುಕ್‌ಔಟ್‌ ಮುಂದುವರಿಸುವುದಕ್ಕೆ ಯಾವುದೇ ಕಾರಣವಿಲ್ಲ’ ಎಂದು ಸ್ಪಷ್ಟಪಡಿಸಿಸದರು.

‘2021ರಲ್ಲಿ ಅವರ ಮೇಲೆ ದಾಖಲಾದ ಎಫ್‌ಐಆರ್‌ನಲ್ಲಿ ನಿರ್ದಿಷ್ಟವಾಗಿ ಯಾವುದೇ ಆರೋಪ ಹೊರಿಸಿಲ್ಲ, ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ, ಇಬ್ಬರ ವಿದೇಶ ಪ್ರವಾಸಕ್ಕೆ ಅಡ್ಡಿಯುಂಟುಮಾಡುವ ಲುಕ್‌ಔಟ್‌ ಆದೇಶವನ್ನೇ ವಜಾಗೊಳಿಸಲಾಗಿದೆ’ ಎಂದು ತಿಳಿಸಿದರು.

ADVERTISEMENT

2021ರ ಜ.26ರಂದು ನವದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) 124ಎ (ದೇಶದ್ರೋಹ), 153A ಕಲಂನಡಿ (ವಿವಿಧ ಸಮುದಾಯ/ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು) 153 (ಪ್ರಚೋದನೆ) ಹಾಗೂ 120 ಬಿ (ಕ್ರಿಮಿನಲ್‌ ಸಂಚು) ರೂಪಿಸಿದ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.