ADVERTISEMENT

ಪ್ರತಿಭಟನೆ 16ನೇ ದಿನಕ್ಕೆ: ಪರಿಹಾರ ದೇವರಿಗೆ ಗೊತ್ತು –ರೈತ ಮುಖಂಡ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 3:27 IST
Last Updated 11 ಡಿಸೆಂಬರ್ 2020, 3:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಕೃಷಿ ಕಾಯ್ದೆ ರದ್ದುಪಡಿಸಲು ಆಗ್ರಹಿಸಿ ಕಳೆದ ಎರಡು ವಾರಗಳಿಂದ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ 16ನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನೆ ನಡೆಸುತ್ತಿರುವ ರೈತರು ರೈಲು ತಡೆಯುವ ಮೂಲಕ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ರೈತ ಮುಖಂಡ ಶಿವಕುಮಾರ್‌ ಕಕ್ಕ ಸಮಸ್ಯೆ ಬಗೆಹರಿಯುವುದು ದೇವರಿಗೆ ಮಾತ್ರ ಗೊತ್ತು ಎಂದು ಹೇಳಿದ್ದಾರೆ.

ಗುರುವಾರ ಸಭೆ ನಡೆಸಿದ ರೈತ ಸಂಘಟನೆಗಳು, ದೇಶಾದ್ಯಂತ ರೈಲು ಹಳಿಗಳನ್ನು ಬಂದ್ ಮಾಡುವ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ತಿಳಿಸಿದವು.

ADVERTISEMENT

‘ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದ್ದೇವೆ. ಅದರ ಅಂಗವಾಗಿ ರೈಲುಗಳು ರಾಜಧಾನಿ ಪ್ರವೇಶಿಸುವುದಕ್ಕೆ ತಡೆ ಒಡ್ಡಲಾಗುವುದು. ಈ ಪ್ರತಿಭಟನೆ ಹರಿಯಾಣ ಹಾಗೂ ಪಂಜಾಬ್‌ಗೆ ಮಾತ್ರ ಸೀಮಿತವಾಗಿರುವುದಿಲ್ಲ. ದೇಶದಾದ್ಯಂತ ರೈ‌ಲು ತಡೆ ಚಳುವಳಿ ಹಮ್ಮಿಕೊಳ್ಳುತ್ತೇವೆ’ ಎಂದು ರೈತ ನಾಯಕ ಬೂಟಾ ಸಿಂಗ್ ಹೇಳಿದ್ದಾರೆ.

‘ವ್ಯಾಪಾರಿಗಳಿಗಾಗಿ ಕೃಷಿ ಕಾಯ್ದೆಗಳನ್ನು ತರಲಾಗಿದೆ ಎಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಕೃಷಿಯು ರಾಜ್ಯಪಟ್ಟಿಯಲ್ಲಿ ಬರುತ್ತದೆ. ಹೀಗಿರುವಾಗ ಕೇಂದ್ರ ಸರ್ಕಾರಕ್ಕೆ ಕಾಯ್ದೆಗಳನ್ನು ರೂಪಿಸುವ ಅಧಿಕಾರ ಇಲ್ಲ’ ಎಂದು ರೈತ ಮುಖಂಡ ಬಲ್ಬೀರ್ ಸಿಂಗ್ ರಾಜೇವಾಲ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.