ADVERTISEMENT

ರೈತರು ಪ್ರತಿಭಟನೆ ಅಂತ್ಯಗೊಳಿಸುವುದಿಲ್ಲ: ಸಂಯುಕ್ತ ಕಿಸಾನ್‌ ಮೋರ್ಚಾ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2021, 20:02 IST
Last Updated 18 ಏಪ್ರಿಲ್ 2021, 20:02 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದರೂ ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯನ್ನು ಬೇಡಿಕೆಗಳು ಈಡೇರದೆ ರೈತರು ಅಂತ್ಯಗೊಳಿಸುವುದಿಲ್ಲ ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ತಿಳಿಸಿದೆ.

ಸರ್ಕಾರ ಕೊರೊನಾ ವೈರಸ್‌ ವಿರುದ್ಧ ಹೋರಾಟ ನಡೆಸಲಿ. ರೈತರ ವಿರುದ್ಧ ಅಲ್ಲ. ರೈತರು ಪ್ರತಿಭಟನೆ ನಡೆಸುತ್ತಿರುವ ಸ್ಥಳಗಳಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಬೇಕು. ಜತೆಗೆ, ವೈರಸ್‌ನಿಂದ ರಕ್ಷಿಸಿಕೊಳ್ಳಲು ಅಗತ್ಯ ಉಪಕರಣಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT