ನವದೆಹಲಿ: ಹೊಸ ಕೃಷಿ ಕಾಯ್ದೆ ಕುರಿತು ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತರ ಪ್ರತಿನಿಧಿಗಳ ನಡುವಣ 10ನೇ ಸುತ್ತಿನ ಮಾತುಕತೆಯನ್ನು ಇದೇ 20ಕ್ಕೆ (ಬುಧವಾರ) ಮುಂದೂಡಲಾಗಿದೆ.
ಆದಷ್ಟು ಬೇಗ ಬಿಕ್ಕಟ್ಟನ್ನು ಬಗೆಹರಿಸಲು ಎರಡೂ ಕಡೆಯವರು ನಿರ್ಧರಿಸಿದ್ದಾರೆ ಆದರೆ ಸೈದ್ಧಾಂತಿಕ ಭಿನ್ನಾಭಿಪ್ರಾಯ ಇರುವವರಮಧ್ಯಪ್ರವೇಶದಿಂದಾಗಿ ಇದು ವಿಳಂಬ ಆಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಾತುಕತೆಯು ಜನವರಿ 19ಕ್ಕೆ ಬದಲು ಜನವರಿ 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ ಭವನದಲ್ಲಿ ನಡೆಯಲಿದೆ ಎಂದು ಕೃಷಿ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಬಿಕ್ಕಟ್ಟನ್ನು ಇತ್ಯರ್ಥಪಡಿಸಲು ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಮಿತಿಯು ತನ್ನ ಮೊದಲ ಸಭೆಯನ್ನು ಮಂಗಳವಾರ ನಡೆಸಲಿದೆ.
‘ಅನಿವಾರ್ಯ ಕಾರಣಗಳಿಂದ ಸಭೆ ಮುಂದಕ್ಕೆ ಹೋಗಿದೆ. ನೀವು ಸಭೆಯಲ್ಲಿ ಭಾಗವಹಿಸಬೇಕು‘ ಎಂದು ಕೃಷಿ ಸಚಿವಾಲಯದ ಕಾರ್ಯದರ್ಶಿ ಸಂಜಯ್ ಅಗರ್‌ವಾಲ್ ಅವರು 40 ರೈತಸಂಘಟನೆಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.