ADVERTISEMENT

ಕೃಷಿ ಕಾಯ್ದೆ ವಿರೋಧಿಸಿ ಡಿಸೆಂಬರ್‌ವರೆಗೂ ರೈತರ ಪ್ರತಿಭಟನೆ: ರಾಕೇಶ್‌ ಟಿಕಾಯಿತ್‌

ಪಿಟಿಐ
Published 14 ಮಾರ್ಚ್ 2021, 14:34 IST
Last Updated 14 ಮಾರ್ಚ್ 2021, 14:34 IST
ರಾಕೇಶ್‌ ಟಿಕಾಯಿತ್‌
ರಾಕೇಶ್‌ ಟಿಕಾಯಿತ್‌   

ಅಲಹಾಬಾದ್‌: ಕೇಂದ್ರ ಸರ್ಕಾರ ರೂಪಿಸಿರುವ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಹೋರಾಟವನ್ನು ಡಿಸೆಂಬರ್‌ವರೆಗೂ ಮುಂದುವರಿಸುವ ಸಾಧ್ಯತೆ ಇದೆ ಎಂದು ಭಾರತೀಯ ಕಿಸಾನ್‌ ಸಂಯುಕ್ತ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ತಿಳಿಸಿದ್ದಾರೆ.

‘ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕಾನೂನು ರೂಪಿಸುವಂತೆ ಒತ್ತಾಯಿಸಿ ವಿವಿಧ ರಾಜ್ಯಗಳಿಗೆ ಭೇಟಿ ನೀಡಲಾಗುವುದು. ಈಗಾಗಲೇ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದೆ. ಪ್ರತಿ ಕ್ವಿಂಟಲ್‌ ಭತ್ತಕ್ಕೆ ₹1850 ದರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ಎಂದು ಪಶ್ಚಿಮ ಬಂಗಾಳ ರೈತರಿಗೆ ತಿಳಿಸಿರುವೆ’ ಎಂದು ಹೇಳಿದ್ದಾರೆ.

‘ಬಿಹಾರದಲ್ಲಿ ಭತ್ತವನ್ನು ಪ್ರತಿ ಕ್ವಿಂಟಲ್‌ಗೆ ಕೇವಲ ₹750ರಿಂದ 800 ನೀಡಿ ಖರೀದಿಸಲಾಗುತ್ತಿದೆ. ಹೀಗಾಗಿ, ವಿವಿಧ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕಾನೂನು ಅತ್ಯಗತ್ಯವಾಗಿದೆ’ ಎಂದು ಪ್ರತಿಪಾದಿಸಿದ್ದಾರೆ.

ADVERTISEMENT

‘ಮಧ್ಯಪ್ರದೇಶದಲ್ಲಿ ಮಾರ್ಚ್‌ 15, ರಾಜಸ್ಥಾನದಲ್ಲಿ 17 ಹಾಗೂ ಕರ್ನಾಟಕದಲ್ಲಿ ಮಾರ್ಚ್‌ 21 ಮತ್ತು 22ರಂದು ಪ್ರವಾಸ ಕೈಗೊಳ್ಳಲಾಗುವುದು’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.