ADVERTISEMENT

ಟ್ರ್ಯಾಕ್ಟರ್ ರ್‍ಯಾಲಿ: ಪೊಲೀಸ್‌ ಅಧಿಕಾರಿಗಳ ಜತೆ ರೈತ ಮುಖಂಡರ ಸಭೆ ಇಂದು

ಪಿಟಿಐ
Published 20 ಜನವರಿ 2021, 7:01 IST
Last Updated 20 ಜನವರಿ 2021, 7:01 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಜನವರಿ 26ರಂದು ನಡೆಸಲು ಉದ್ದೇಶಿಸಿರುವ ಟ್ರ್ಯಾಕ್ಟರ್‌ ರ್‍ಯಾಲಿ ಕುರಿತು ರೈತ ಸಂಘಟನೆಗಳ ಮುಖಂಡರು ಬುಧವಾರ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶದ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ.

ಟ್ರ್ಯಾಕ್ಟರ್‌ ರ‍್ಯಾಲಿ ಮಾರ್ಗ ಮತ್ತು ವ್ಯವಸ್ಥೆ ಕುರಿತು ಮುಖಂಡರು ಅಧಿಕಾರಿಗಳ ಜತೆ ಚರ್ಚೆ ನಡೆಸಲಿದ್ದಾರೆ ಎಂದು ಜಮುರಿ ಕಿಸಾನ್‌ ಯೂನಿಯನ್‌ ನಾಯಕ ಕಲ್ವಂತ್‌ ಸಿಂಗ್ ಸಂಧು ತಿಳಿಸಿದ್ದಾರೆ.

ದೆಹಲಿ ಪೊಲೀಸ್‌ನ ಉತ್ತರ ವಲಯದ ಜಂಟಿ ಪೊಲೀಸ್‌ ಆಯುಕ್ತ ಎಸ್‌.ಎಸ್‌. ಯಾದವ್‌ ಸಭೆ ನಡೆಸುವ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಹರಿಯಾಣ ಮತ್ತು ಉತ್ತರ ಪ್ರದೇಶ ಪೊಲೀಸ್‌ ಅಧಿಕಾರಿಗಳು ಸಹ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಶಾಂತಿಯುತ ರ‍್ಯಾಲಿ ನಡೆಸಲು ಅಧಿಕಾರಿಗಳು ಸಹಕಾರ ನೀಡಬೇಕು. ರ‍್ಯಾಲಿ ನಿಲ್ಲಿಸುವ ಪ್ರಯತ್ನ ಮಾಡಬಾರದು ಎಂದು ರೈತ ಸಂಘಟನೆಗಳ ಮುಖಂಡರು ಕೋರಿದ್ದಾರೆ.

ದೆಹಲಿ ಗಡಿಯಲ್ಲಿ ಕಳೆದ 56 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಟ್ರ್ಯಾಕ್ಟರ್‌ ರ‍್ಯಾಲಿ ನಡೆಸಲು ಭರದಿಂದ ಸಿದ್ಧತೆಗಳನ್ನು ರೈತರು ಕೈಗೊಂಡಿದ್ದಾರೆ. ಇದಕ್ಕೆ ಮುನ್ನವೇ ಜನರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಪಂಜಾಬ್‌ನ ಹಳ್ಳಿಗಳಲ್ಲೂ ರ‍್ಯಾಲಿಗಳನ್ನು ಆಯೋಜಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.