ADVERTISEMENT

ಹಣ ಅಕ್ರಮ ವರ್ಗಾವಣೆ ಆರೋಪ: ಇ.ಡಿ. ವಿಚಾರಣೆ ಎದುರಿಸಿದ ಫಾರೂಕ್ ಅಬ್ದುಲ್ಲಾ

​ಪ್ರಜಾವಾಣಿ ವಾರ್ತೆ
Published 31 ಮೇ 2022, 13:13 IST
Last Updated 31 ಮೇ 2022, 13:13 IST
ಫಾರೂಖ್‌ ಅಬ್ದುಲ್ಲಾ
ಫಾರೂಖ್‌ ಅಬ್ದುಲ್ಲಾ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್‌ ಅಸೋಸಿಯೆಷನ್‌ನಲ್ಲಿ (ಜೆಕೆಸಿಎ) ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಜಾರಿ ನಿರ್ದೇಶನಾಲಯ(ಇ.ಡಿ)ಮಂಗಳವಾರ ಮೂರು ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿತು.

ಶ್ರೀನಗರದ ಸಂಸದರೂ ಆಗಿರುವ ಅವರು ರಾಜ್‌ಬಾಘ್‌ನಲ್ಲಿ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾನು ಇ.ಡಿ ಸಮನ್ಸ್‌ ಬಗ್ಗೆ ಮಾತನಾಡುವುದಿಲ್ಲ. ಚುನಾವಣೆ ನಡೆಯುವವರೆಗೂ ಅವರು ನಮಗೆ ತೊಂದರೆ ನೀಡುತ್ತಾರೆ’ ಎಂದು ಹೇಳಿದರು.

ವಿಚಾರಣೆ ಬಳಿಕ ಇ.ಡಿ ಕಚೇರಿಯಿಂದ ಹೊರಬಂದ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

ಅಕ್ರಮ ಹಣ ವರ್ಗಾವಣೆ ಸಂಬಂಧ ಅಬ್ದುಲ್ಲಾ ಅವರಿಗೆ ಮೇ 27ರಂದು ಇ.ಡಿ. ಸಮನ್ಸ್‌ ಜಾರಿ ಮಾಡಿತ್ತು. ಇದೇ ಪ್ರಕರಣದಲ್ಲಿ 2019ರಲ್ಲೂ ಇ.ಡಿ.ಮುಂದೆ ಹೇಳಿಕೆ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.