ADVERTISEMENT

ರಾಷ್ಟ್ರಪತಿ ಸ್ಥಾನಕ್ಕೆ ಸ್ಪರ್ಧಿಸುವುದಿಲ್ಲ: ಫಾರೂಕ್‌ ಅಬ್ದುಲ್ಲಾ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 11:41 IST
Last Updated 18 ಜೂನ್ 2022, 11:41 IST
 ಫಾರೂಕ್‌ ಅಬ್ದುಲ್ಲಾ
ಫಾರೂಕ್‌ ಅಬ್ದುಲ್ಲಾ   

ಶ್ರೀನಗರ: ರಾಷ್ಟ್ರಪತಿ ಚುನಾವಣೆಯಲ್ಲಿ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಿಲ್ಲ ಎಂದು ನ್ಯಾಷನಲ್‌ ಕಾನ್ಫರೆನ್ಸ್ (ಎನ್‌ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಶನಿವಾರ ಹೇಳಿದ್ದಾರೆ. ಸಂದಿಗ್ಧ ಸ್ಥಿತಿಯಲ್ಲಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಮಾರ್ಗದರ್ಶನ ನೀಡುವುದಾಗಿ ಅವರು ತಿಳಿಸಿದ್ದಾರೆ.

ಈಚೆಗೆ ನಡೆದ ಪ್ರತಿಪಕ್ಷಗಳ ನಾಯಕರ ಸಭೆಯಲ್ಲಿ ರಾಷ್ಟ್ರಪತಿ ಅಧ್ಯಕ್ಷ ಸ್ಥಾನದಅಭ್ಯರ್ಥಿಯಾಗಿ ತಮ್ಮ ಹೆಸರು ಪ್ರಸ್ತಾಪಿಸಿರುವುದಕ್ಕೆ ವಿರೋಧ ಪಕ್ಷದ ನಾಯಕರಿಗೆ ಧನ್ಯವಾದ ತಿಳಿಸಿರುವ ಅವರು,’ಮಮತಾ ದೀದಿ ಅವರು ನನ್ನ ಹೆಸರು ಪ್ರಸ್ತಾಪಿಸುತ್ತಿದ್ದಂತೆ ವಿರೋಧ ಪಕ್ಷದ ಹಲವು ನಾಯಕರು ಕರೆ ಮಾಡಿ ಬೆಂಬಲ ಸೂಚಿಸಿದರು. ಈ ಅನಿರೀಕ್ಷಿತ ಬೆಳವಣಿಗೆ ಬಗ್ಗೆ ಪಕ್ಷದ ಹಿರಿಯ ನಾಯಕರು ಮತ್ತು ಕುಟುಂಬದವರ ಜತೆ ಚರ್ಚಿಸಿದ್ದೇನೆ‘ ಎಂದು ಫಾರೂಕ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

’ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲಾಗುವುದು’ ಎಂದು ಪಕ್ಷವು ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.