ADVERTISEMENT

ಜ.1ರಿಂದ ಫಾಸ್ಟ್ಯಾಗ್‌ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2020, 20:58 IST
Last Updated 24 ಡಿಸೆಂಬರ್ 2020, 20:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: 2021ರ ಜನವರಿ 1ರಿಂದ ವಾಹನಗಳಿಗೆ ಫಾಸ್ಟ್ಯಾಗ್‌ ಕಡ್ಡಾಯ ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಗುರುವಾರ ಹೇಳಿದ್ದಾರೆ.

ಟೋಲ್‌ ಕೇಂದ್ರಗಳಲ್ಲಿ ಡಿಜಿಟಲ್‌ ರೂಪದಲ್ಲಿ ಶುಲ್ಕ ಪಾವತಿಗೆ ಅವಕಾಶ ಕೊಡುವ ಫಾಸ್ಟ್ಯಾಗ್‌ ವ್ಯವಸ್ಥೆಯನ್ನು 2016ರಲ್ಲಿ ಆರಂಭಿಸಲಾಗಿತ್ತು.

2021ರ ಜನವರಿ 1ರಿಂದ ಫಾಸ್ಟ್ಯಾಗ್‌ ಕಡ್ಡಾಯ ಎಂಬ ಅಧಿಸೂಚನೆಯನ್ನು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ನವೆಂಬರ್‌ನಲ್ಲಿಯೇ ಹೊರಡಿಸಿತ್ತು. ನಾಲ್ಕು ಚಕ್ರಗಳ ಎಲ್ಲ ವಾಹನಗಳ ನೋಂದಣಿಗೆ 2017ರ ಡಿಸೆಂಬರ್‌ 1ರಿಂದಲೇ ಫಾಸ್ಟ್ಯಾಗ್‌ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಈಗ, 2017ರ ಡಿಸೆಂಬರ್‌ಗೂ ಮೊದಲು ಮಾರಾಟವಾದ ವಾಹನಗಳಿಗೂ ಫಾಸ್ಟ್ಯಾಗ್‌ ಕಡ್ಡಾಯವಾಗಲಿದೆ.

ADVERTISEMENT

ವಿಮೆ ನವೀಕರಣಕ್ಕೂ ಫಾಸ್ಟ್ಯಾಗ್‌ ಅನ್ನು ಕಡ್ಡಾಯಗೊಳಿಸಲಾಗಿದೆ. ಅದು 2021ರ ಏಪ್ರಿಲ್‌ 1ರಿಂದ ಜಾರಿಗೆ ಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.