ನವದೆಹಲಿ: ನಾಲ್ಕುಚಕ್ರದ ಎಲ್ಲ ವಾಹನಗಳಿಗೆ ಜನವರಿ 1ರಿಂದ ‘ಫಾಸ್ಟ್ಯಾಗ್’ ಕಡ್ಡಾಯಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮುಂದಾಗಿದೆ.
2017ರ ಬಳಿಕ ತಯಾರಾದ ಹೊಸ ವಾಹನಗಳಿಗೆಫಾಸ್ಟ್ಯಾಗ್ ಕಡ್ಡಾಯ ಮಾಡಲಾಗಿತ್ತು. 2017ಕ್ಕೂ ಮುಂಚೆ ತಯಾರಿಸಲಾದ ಎಲ್ಲ ನಾಲ್ಕು ಚಕ್ರದ ವಾಹನಗಳಿಗೂ ಇದೀಗ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ.
ಇದನ್ನು ಜಾರಿಗೆ ತರುವ ಸಂಬಂಧ ಸಚಿವಾಲಯವು ಕೇಂದ್ರ ಮೋಟಾರು ವಾಹನ ನಿಯಮಗಳಿಗೆಶೀಘ್ರದಲ್ಲೇ ತಿದ್ದುಪಡಿ ಮಾಡಲಿದೆ.
ಟೋಲ್ ಕೇಂದ್ರಗಳಲ್ಲಿ ವಾಹನ ದಟ್ಟಣೆ ತಡೆಯಲು ಹಾಗೂ ಡಿಜಿಟಲ್ ವಹಿವಾಟು ಉತ್ತೇಜಿಸಲು ಸರ್ಕಾರವು ಫಾಸ್ಟ್ಯಾಗ್ ಕಡ್ಡಾಯಗೊಳಿಸುತ್ತಿದೆ. ನಿಯಮ ಮೀರಿದರೆ ದಂಡ ವಿಧಿಸುವ ಅವಕಾಶವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.