ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್‌ಗಳಲ್ಲಿ ಫಾಸ್ಟ್ಯಾಗ್ ಕಡ್ಡಾಯಗೊಳಿಸುವ ಕ್ರಮಗಳನ್ನು ಕೈಗೊಂಡಿದ್ದರಿಂದ ಶುಲ್ಕ ಸಂಗ್ರಹದಲ್ಲೂ ಏರಿಕೆಯಾಗಿದೆ.
ಪ್ರತಿ ದಿನದ ಶುಲ್ಕ ₹68 ಕೋಟಿಯಿಂದ ₹81 ಕೋಟಿಗೆ ಹೆಚ್ಚಳವಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಫಾಸ್ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ, ಟೋಲ್ ಶುಲ್ಕ ಸಂಗ್ರಹದಲ್ಲಿ ನಡೆಯುತ್ತಿದ್ದ ಅವ್ಯವಹಾರಗಳಿಗೂ ಕಡಿವಾಣಿ ಬಿದ್ದಿದೆ. ಸಂಪೂರ್ಣವಾಗಿ ಫಾಸ್ಟ್ಯಾಗ್ ಜಾರಿಯಾದ ಬಳಿಕ ಶುಲ್ಕ ಸಂಗ್ರಹದಲ್ಲಿ ಇನ್ನೂ ಹೆಚ್ಚಳವಾಗಲಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.