ಪ್ರಾತಿನಿಧಿಕ ಚಿತ್ರ
ಹಮೀರ್‌ಪುರ: ಕಾನ್ಪುರದಲ್ಲಿ ಈಚೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಬಾಲಕಿಯರ ಪೈಕಿ ಒಬ್ಬ ಬಾಲಕಿಯ ತಂದೆಯ ಮೃತದೇಹ ಸಿಸೋಲಾರ್ ಪ್ರದೇಶದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದರು.
45 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹವು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ವಿವರಿಸಿದರು. ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿಯರ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದರು.
‘ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಜಿ ಸಂಧಾನಕ್ಕೆ ಒಪ್ಪಿಕೊಳ್ಳುವಂತೆ ಬಾಲಕಿಯ ತಂದೆಗೆ ಆರೋಪಿಗಳ ಕಡೆಯವರು ಒತ್ತಡ ಹೇರಿದ್ದರು’ ಎಂದು ಮೃತ ವ್ಯಕ್ತಿಯ ಸಂಬಂಧಿಕರೊಬ್ಬರು ಆರೋಪಿಸಿದರು. ಮೃತರ ಕುಟುಂಬದ ಆರೋಪಗಳ ಕುರಿತು ಪ್ರತಿಕ್ರಿಯಿಸಲು ಪೊಲೀಸರು ನಿರಾಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.