
ಮುಖ 10 ಸುದ್ದಿಗಳು
ರಾಜ್ಯ, ರಾಷ್ಟ್ರೀಯ, ಅಂತರರಾಷ್ಟ್ರೀಯ ವಿಷಯಗಳಿಗೆ ಸಂಬಂಧಪಟ್ಟಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿರುವ ಕೆಂಪು ಕೋಟೆ ಬಳಿ ಕಳೆದ ವರ್ಷ ನಡೆದ ಸ್ಫೋಟ ಪ್ರಕರಣದ ತನಿಖೆ ಪೂರ್ಣಗೊಳಿಸಲು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್‌ಐಎ) ದೆಹಲಿ ನ್ಯಾಯಾಲಯವು ಶುಕ್ರವಾರ ಹೆಚ್ಚುವರಿಯಾಗಿ 45 ದಿನಗಳ ಕಾಲಾವಕಾಶ ನೀಡಿದೆ.
ನವದೆಹಲಿ: ‘ಪೊನ್ನಿಯಿನ್ ಸೆಲ್ವನ್–2’ ಸಿನಿಮಾದ ‘ ವೀರ ರಾಜ ವೀರ’ ಹಾಡಿನಲ್ಲಿ ದಗರ್‌ವಾನಿ ಸಂಪ್ರದಾಯದ ಕೊಡುಗೆ ಇರುವುದನ್ನು ಒಪ್ಪಿಕೊಳ್ಳಿ ಎಂದು ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಿನಿಮಾ ನಿರ್ಮಾಪಕರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ಅಲಹಾಬಾದ್: ವ್ಯಕ್ತಿಯೊಬ್ಬನ ಜಾತಿಯು ಜನನದಿಂದಲೇ ನಿರ್ಧಾರವಾಗಿರುತ್ತದೆ. ಮದುವೆ ಅಥವಾ ಮತಾಂತರದ ಬಳಿಕವೂ ಅದು ಬದಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಕೊಚ್ಚಿ: ಕೇರಳದಲ್ಲಿ ಇತ್ತೀಚೆಗೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಿದುಳು ನಿಷ್ಕ್ರಿಯವಾಗಿದ್ದ 10 ತಿಂಗಳ ಹೆಣ್ಣು ಮಗು ಅಲಿನ್ ಅಬ್ರಾಹಂಳ ಅಂಗಾಂಗಳನ್ನು ದಾನ ಮಾಡಲಾಗಿದೆ.
ತಿಪಟೂರು: ‘ಶ್ರಮಕ್ಕೆ ಪ್ರತಿಫಲ ಸಿಕ್ಕೇ ಸಿಗುತ್ತದೆ ಎಂಬ ಭರವಸೆ ಇದೆ. ಅದು ಸಿಕ್ಕೇ ಸಿಗುತ್ತದೆ ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ಇಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ‘ವಿಲಾಸಿ ಲ್ಯಾಂಬೋರ್ಗಿನಿ ಕಾರನ್ನು ಸುಳ್ಳು ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸಿಕೊಳ್ಳಲಾಗಿದೆ’ ಎಂದು ಆರೋಪಿಸಿ ಮಧ್ಯರಾತ್ರಿ ಮಾಲೀಕರ ಗ್ಯಾರೇಜ್‌ಗೆ ನುಗ್ಗಿ ಕಾರನ್ನು ಏಕಾಏಕಿ ಟೋಯಿಂಗ್ ಮೂಲಕ ತೆಗೆದುಕೊಂಡು ಹೋಗಿರುವ ಹಿರಿಯ ಮೋಟಾರು ವಾಹನಗಳ ನಿರೀಕ್ಷಕರೊಬ್ಬರನ್ನು (ಎಂವಿಐ) ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ನವದೆಹಲಿ: ಪ್ರಧಾನಿ ವಿರುದ್ಧ ಅಸಂಸದೀಯ ಭಾಷೆ ಬಳಸಿದ್ದಕ್ಕಾಗಿ, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸರ್ಕಾರ ಯಾವುದೇ ಗೊತ್ತುವಳಿ ಮಂಡಿಸುವುದಿಲ್ಲ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಶುಕ್ರವಾರ ಹೇಳಿದ್ದಾರೆ.
ನವದೆಹಲಿ: ಹಾಲಿ ನ್ಯಾಯಾಧೀಶರು/ನ್ಯಾಯಮೂರ್ತಿಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ (ಸಿಜೆಐ) 2016ರಿಂದ ಇಲ್ಲಿಯವರೆಗೆ 8,630 ದೂರುಗಳು ಬಂದಿವೆ ಎಂದು ಕೇಂದ್ರ ಕಾನೂನು ಸಚಿವಾಲಯವು ಲೋಕಸಭೆಯಲ್ಲಿ ಶುಕ್ರವಾರ ಬಹಿರಂಗಪಡಿಸಿದೆ.
ನವದೆಹಲಿ: ‘ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ 50ಕ್ಕೂ ಅಧಿಕ ವಿಮಾನ ನಿಲ್ದಾಣಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ. ಇದು ದೇಶದ ರಿಯಲ್ ಎಸ್ಟೇಟ್ ವಯಲಕ್ಕೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಲಿದೆ’ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಹೇಳಿದ್ದಾರೆ.
ಕೊಲಂಬೊ: ಹೊಟ್ಟೆಕೆಟ್ಟು ಈಗ ಚೇತರಿಸಿಕೊಳ್ಳುತ್ತಿರುವ ಸ್ಫೋಟಕ ಆರಂಭ ಆಟಗಾರ ಅಭಿಷೇಕ್ ಶರ್ಮಾ ಅವರು ಶುಕ್ರವಾರ ಭಾರತ ತಂಡದ ಜೊತೆ ಇಲ್ಲಿಗೆ ಬಂದಿಳಿದರು. ಪಾಕಿಸ್ತಾನ ವಿರುದ್ಧ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿರುವ ವಿಶ್ವಕಪ್ ಪಂದ್ಯದಲ್ಲಿ ಅವರು ಆಡಬಹುದೆಂಬ ವಿಶ್ವಾಸಕ್ಕೆ ಇದು ಕಾರಣವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.