
ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ.

ಕಳೆದ ವರ್ಷದ ಅಹಮದಾಬಾದ್‌ನಲ್ಲಿ ನಡೆದಿದ್ದ ವಿಮಾನ ಅಪಘಾತದ ತನಿಖೆ ನಡೆಯುತ್ತಿರುವ ಬೆನ್ನಲ್ಲೇ ಸೋಮವಾರ ಲಂಡನ್‌ನಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಕಂಡುಬಂದಿದೆ ಎಂದು ವರದಿಯಾಗಿದೆ.
ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಿಂದಾಗಿ (ಎಸ್‌ಐಆರ್) ತೊಂದರೆಗೀಡಾಗಿರುವ ಕಟುಂಬಗಳಿಗೆ ದೆಹಲಿಯ ಬಂಗ ಭವನದಲ್ಲಿ ಕಿರುಕುಳ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಆದಾಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ನೆರವಾಗಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ತಾಯಿ ಹುಲಿಗೆಮ್ಮ ಸಂಗಪ್ಪ ಅವರು ಒಂದು ಎಕರೆ ಭೂಮಿ ದಾನ ನೀಡಿದ್ದಾರೆ.
ದೇಶದ 10 ರಾಜ್ಯಗಳಲ್ಲಿ ತೀವ್ರ ಶೋಧ ಕಾರ್ಯಾಚರಣೆ ನಡೆಸಿದ ಸಿಬಿಐ ಪ್ರಮುಖ ಸೈಬರ್ ಪ್ರಕರಣಗಳ ಆರೋಪಿಯೊಬ್ಬರನ್ನು ಬಂಧಿಸಿದೆ.
ಹೈಕೋರ್ಟ್ ಹಾಗೂ ನ್ಯಾ. ನಾಗಪ್ರಸನ್ನ
‘ಲೋಕ್ ಅದಾಲತ್‌ನಲ್ಲಿ ಗಾಂಜಾ ಆರೋಪದ ಕೇಸುಗಳನ್ನೂ ಸೆಟಲ್ ಮಾಡಲಾಗುತ್ತದೆಯೇ’ ಎಂದು ಹೈಕೋರ್ಟ್ ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಗಾಂಜಾ ಮಾರಾಟದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಮೈಸೂರಿನ ಸಮೀರ್ ಖಾನ್ ಅಲಿಯಾಸ್ ದಾದು (51) ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಸುರಂಗ ರಸ್ತೆ
‘ಹೆಬ್ಬಾಳದಿಂದ ಸಿಲ್ಕ್ ಬೋರ್ಡ್‌ವರೆಗೂ ಸುರಂಗ ರಸ್ತೆ ನಿರ್ಮಾಣ ಯೋಜನೆ ಕಾಮಗಾರಿ ಆರಂಭಿಸಲು 2026 ಫೆಬ್ರುವರಿ ಅಂತ್ಯಕ್ಕೆ ಸರ್ಕಾರ ಕಾರ್ಯಾದೇಶ ನೀಡಲಿದೆ ಎಂಬ ಹೇಳಿಕೆ ಸುಳ್ಳು’ ಎಂದು ಅಡ್ವೋಕೇಟ್ ಜನರಲ್ (ಎಜಿ) ಹೈಕೋರ್ಟ್‌ಗೆ ಸ್ಪಷ್ಟಪಡಿಸಿದರು.
ಅಪರೂಪದ ಖನಿಜ ಪೂರೈಕೆ ಸರಪಳಿ ಕುರಿತು ವಾಷಿಂಗ್ಟನ್‌ನಲ್ಲಿ ನಡೆಯಲಿರುವ ಸಚಿವರ ಸಭೆಯಲ್ಲಿ ಭಾಗವಹಿಸಲು ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸೋಮವಾರದಿಂದ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ.
ಫೆಬ್ರುವರಿ 7ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟ್ರೋಫಿಯು ಹಲವು ವಿವಾದಗಳಿಗೆ ಕಾರಣವಾಗಿದೆ. ಭಾರತದಲ್ಲಿ ಆಡಲು ನಿರಾಕರಿಸಿದ ಬಾಂಗ್ಲಾದೇಶ ತಂಡವನ್ನು ಟೂರ್ನಿಯಿಂದಲೇ ಹೊರಗಿಡಲಾಗಿದೆ. ಇತ್ತ ಪಾಕಿಸ್ತಾನ ತಂಡ ಭಾರತದ ವಿರುದ್ಧ ಪಂದ್ಯ ಆಡದಿರಲು ನಿರ್ಧರಿಸಿದೆ.
ಟಿಬೆಟಿಯನ್ ಧರ್ಮಗುರು ದಲೈ ಲಾಮ ಅವರು ಇದೇ ಮೊದಲ ಬಾರಿಗೆ 'ಗ್ರ್ಯಾಮಿ ಪ್ರಶಸ್ತಿ' ಗೌರವಕ್ಕೆ ಭಾಜನರಾಗಿದ್ದಾರೆ. 'ಅತ್ಯುತ್ತಮ ಆಡಿಯೊ ಬುಕ್ ಪ್ರಸ್ತುತಿ'ಗಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
‘ಭೂವಿಜ್ಞಾನದ ನೊಬೆಲ್ ಪ್ರಶಸ್ತಿ’ ಎಂದು ಖ್ಯಾತಿಯಾದ 2026ರ ‘ಕಾರ್ಪರ್ಡ್ ಪ್ರಶಸ್ತಿ’ಯು ಅಮೆರಿಕದಲ್ಲಿನ ಭಾರತ ಮೂಲದ ಖ್ಯಾತ ಪರಿಸರ ವಿಜ್ಞಾನಿ ವೀರಭದ್ರನ್ ರಾಮನಾಥನ್ ಅವರಿಗೆ ಸಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.