ಲಾಹೋರ್: ಭಾರತೀಯ ಸೇನೆ, ಪಂಜಾಬ್ ಪ್ರಾಂತ್ಯದ ಗುಜರಾತ್‌ನಲ್ಲಿ ಶನಿವಾರ ನಡೆಸಿದ ಡ್ರೋನ್ ಮತ್ತು ಗುಂಡಿನ ದಾಳಿಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ ಮತ್ತು ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.
ಲಾಹೋರ್, ಚಿನಿಯೋಟ್, ಪಾಕ್‌ಪಟ್ಟಣ್, ಖಾರಿಯಾ, ಶೇಖುಪುರ ಮತ್ತು ಜಲಪುರ ಜಟ್ಟನ್ ಪ್ರದೇಶಗಳ ಮೇಲೆ ದಾಳಿ ನಡೆದಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದರು.
ಭಾರತೀಯ ಸೇನೆ ನಡೆಸಿದ ದಾಳಿಯಿಂದ ಶೇಖ್ ಜಾಯೇದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಕಷ್ಟು ಹಾನಿಯಾಗಿದೆ ಎಂದು ಅವರು ಹೇಳಿದರು.
ಯುಎಇ ಅಧ್ಯಕ್ಷರು ಮತ್ತು ಅವರ ಕುಟುಂಬ ಬಳಕೆ ಮಾಡುತ್ತಿದ್ದ ರಾಯಲ್ ಲಾಂಜ್ ಸೇರಿದಂತೆ ಸಾಕಷ್ಟು ಮೂಲಸೌಕರ್ಯಗಳಿಗೆ ಹಾನಿಯಾಗಿದೆ ಎಂದರು.
ಭಾರತವು ವಿಮಾನ ನಿಲ್ದಾಣಗಳನ್ನು ಗುರಿಯಾಗಿಸಿ ಕ್ಷಿಪಣಿ ಮತ್ತು ಡ್ರೋನ್ ದಾಳಿ ನಡೆಸಿತ್ತು ಎಂದು ಹಿರಿಯ ಅಧಿಕಾರಿ ಖುರಾಮ್ ಜಾವೇದ್ ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.