ಛತ್ತಾರ್‌ಪುರ್: ಮಧ್ಯಪ್ರದೇಶದ ಛತ್ತಾರ್‌ಪುರ ಜಿಲ್ಲೆಯಲ್ಲಿ ಸಮಾರಂಭವೊಂದರಲ್ಲಿ ಮದ್ಯಪಾನ ಮಾಡಿದ್ದ ನಾಲ್ವರು ಮೃತಪಟ್ಟಿದ್ದು, ಇನ್ನೊಬ್ಬರು ತೀವ್ರವಾಗಿ ಅಸ್ವಸ್ಥರಾಗಿದ್ದಾರೆ.
ಇದು ಕಲಬೆರಕೆಯೂ ಅಲ್ಲ, ಸ್ಥಳೀಯ ಮಧ್ಯವೂ ಅಲ್ಲ. ಇದನ್ನು ಉತ್ತರ ಪ್ರದೇಶದ ಮದ್ಯ ಗುತ್ತಿಗೆದಾರರ ಅಂಗಡಿಯಿಂದ ಖರೀದಿಸಿ ತರಲಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ.
ಈ ಮದ್ಯದ ಮಾದರಿಯನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.