ADVERTISEMENT

ಕೋವಿಡ್‌ಗೆ ಬಲಿಯಾದವರ ಕುಟುಂಬಕ್ಕೆ ₹4 ಲಕ್ಷ ಪರಿಹಾರ ಕೊಡಲಾಗದು: ಕೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜೂನ್ 2021, 6:57 IST
Last Updated 20 ಜೂನ್ 2021, 6:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ನವದೆಹಲಿ: ಕೋವಿಡ್‌ನಿಂದ ಮೃತಪಟ್ಟವರ ಕುಟುಂಬಕ್ಕೆ ಹಣಕಾಸಿನ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿರುವ ಕೇಂದ್ರ ಸರ್ಕಾರ ಇದಕ್ಕಾಗಿ ಹಣಕಾಸಿನ ಮಿತಿಗಳು ಮತ್ತು ಇತರ ಕಾರಣಗಳನ್ನು ಮುಂದಿಟ್ಟಿದೆ.

ಕೋವಿಡ್‌ನಿಂದ ಮೃತಪಟ್ಟವರ ಕುಟುಂಬ ಸದಸ್ಯರಿಗೆ ₹4 ಲಕ್ಷ ಪರಿಹಾರ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳಿಗೆ ಪ್ರತಿಯಾಗಿ ಕೇಂದ್ರ ಈ ಅಫಿಡವಿಟ್‌ ಸಲ್ಲಿಸಿದೆ.

ಕೇಂದ್ರ ಸರ್ಕಾರವು ಈಗಾಗಲೇ ಅರ್ಥಿಕ ನೆರವು ನೀಡಿದೆ. ಅಲ್ಲದೆ, ಅಗತ್ಯವಿರುವವರಿಗೆ ಪರಿಹಾರ ಒದಗಿಸಿದೆ. ರಾಜ್ಯ ಸರ್ಕಾರಗಳೂ ಪರಿಹಾರಗಳನ್ನು ನೀಡಿದೆ ಹೀಗಾಗಿ ಆರ್ಥಿಕ ಹೊರೆ ಸೃಷ್ಟಿಯಾಗಿದೆ ಎಂದೂ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.