ಮುಂಬೈ: ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್.ಸಾಯಿಬಾಬಾ ಅವರ ಪುಣ್ಯಸ್ಮರಣೆಯ ಅಂಗವಾಗಿ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ (ಟಿಐಎಸ್‌ಎಸ್) ಕ್ಯಾಂಪಸ್‌ನಲ್ಲಿ ಕಾರ್ಯಕ್ರಮ ಏರ್ಪಡಿಸಿದ್ದ ಆರೋಪದ ಮೇಲೆ 10 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಆರೋಪಿಗಳು ಜೆಎನ್‌ಯು ವಿದ್ಯಾರ್ಥಿಗಳಾದ, ಸದ್ಯ ಜೈಲಿನಲ್ಲಿರುವ ಶಾರ್ಜೀಲ್ ಇಮಾಮ್ ಮತ್ತು ಉಮರ್ ಖಾಲಿದ್ ಅವರನ್ನೂ ಬೆಂಬಲಿಸಿ ಘೋಷಣೆ ಕೂಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.
ಕಾರ್ಯಕ್ರಮ ನಡೆಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಅವರು ಅನುಮತಿ ಪಡೆದಿರಲಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಆಯೋಜಿಸಿದ್ದನ್ನು ವಿರೋಧಿಸಿ ಟಿಐಎಸ್‌ಎಸ್ ಆಡಳಿತ ಮಂಡಳಿಯು ದೂರು ನೀಡಿತ್ತು. ನಂತರ ಪೊಲೀಸರು 10 ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎಂದು ಅವರು ತಿಳಿಸಿದರು.
ನಕ್ಸಲರೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನುವ ಆರೋಪದ ಮೇಲೆ ಸಾಯಿಬಾಬಾ ಅವರನ್ನು ಬಂಧಿಸಲಾಗಿತ್ತು. 2024ರಲ್ಲಿ ಬಾಂಬೆ ಹೈಕೋರ್ಟ್ ಅವರನ್ನು ಖುಲಾಸೆಗೊಳಿಸಿತ್ತು. ಕಳೆದ ವರ್ಷ ಅಕ್ಟೋಬರ್ 12ರಂದು ಅವರು ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.