ADVERTISEMENT

ಹಣ ದುರ್ಬಳಕೆ: ಶಾಸಕನ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 29 ಜನವರಿ 2020, 11:09 IST
Last Updated 29 ಜನವರಿ 2020, 11:09 IST
ಅಮ್ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾಖಾನ್ ವಿರುದ್ಧ ಪ್ರಕರಣ ದಾಖಲಿಸಿ ದೆಹಲಿ ಎಸಿಬಿ
ಅಮ್ ಆದ್ಮಿ ಪಕ್ಷದ ಶಾಸಕ ಅಮಾನತ್ತುಲ್ಲಾಖಾನ್ ವಿರುದ್ಧ ಪ್ರಕರಣ ದಾಖಲಿಸಿ ದೆಹಲಿ ಎಸಿಬಿ   

ನವದೆಹಲಿ: ಹಣ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಅಮ್ ಆದ್ಮಿ ಪಕ್ಷದ ಶಾಸಕನ ವಿರುದ್ಧ ದೆಹಲಿ ಭ್ರಷ್ಟಾಚಾರ ನಿಗ್ರಹ ದಳ ಎಫ್ ಐಆರ್ ದಾಖಲಿಸಿದೆ.

ಶಾಸಕ ಅಮಾನತ್ತುಲ್ಲಾಖಾನ್ ವಿರುದ್ಧ ದೆಹಲಿ ಎಸಿಬಿ ಪ್ರಕರಣ ದಾಖಲಿಸಿದ್ದು, ಶಾಸಕ ದೆಹಲಿ ಸರ್ಕಾರದಿಂದ ವಕ್ಭ್ ಮಂಡಳಿಗೆ ಬಿಡುಗಡೆಯಾದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸಿ ಹಲವರನ್ನು ವಕ್ಫ್ ಮಂಡಳಿಗೆ ನಿಯೋಜಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಹಲವರನ್ನು ವಿಚಾರಣೆಗೆ ಒಳಪಡಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

ಅಮ್ ಆದ್ಮಿ ಪಕ್ಷದ ವತಿಯಿಂದ ದೆಹಲಿಯಒಕ್ಲಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮಾನತ್ತುಲ್ಲಾಖಾನ್ ಜಯಗಳಿಸಿ ದೆಹಲಿ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.