
ಪಿಟಿಐಅಲಿಗಡ: ವೀರ ಸಾವರ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಹಾಗೂ ಮಾನವ ಹಕ್ಕುಗಳ ಹೋರಾಟಗಾರ ಸಂದೀಪ್ ಪಾಂಡೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಭಾನುವಾರ ಅಲಿಗಡ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ನಡೆದ ಪ್ರತಿಭಟನೆ ಸಂದರ್ಭದಲ್ಲಿ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ರಾಜೀವ್ ಕುಮಾರ್ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.ಈ ದೂರು ಆಧರಿಸಿ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.