ADVERTISEMENT

ಮಥುರಾ: ರಾಮಲೀಲಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ; ಎಫ್‌ಐಆರ್ ದಾಖಲು

ಪಿಟಿಐ
Published 8 ಅಕ್ಟೋಬರ್ 2024, 3:52 IST
Last Updated 8 ಅಕ್ಟೋಬರ್ 2024, 3:52 IST
FIR (Photo: IANS)
FIR (Photo: IANS)   

ಮಥುರಾ: ಸೋಮವಾರ ಸಂಜೆ ಉತ್ತರ ಪ್ರದೇಶದ ಮಥುರಾದಲ್ಲಿ ರಾಮಲೀಲಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಅಶ್ಲೀಲ ನೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ನೃತ್ಯ ಕಲಾವಿದರು ಮತ್ತು ಆಯೋಜಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅಶ್ಲೀಲ ನೃತ್ಯದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಗೋವರ್ಧನ ಪೊಲೀಸ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 296(ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ನೃತ್ಯ ಮತ್ತು ಸಂಗೀತ) ಅಡಿ ಆಯೋಜಕರಾದ ಮುನೀಶ್ ಸ್ವರೂಪ್, ನೃತ್ಯಗಾರ್ತಿ ರಿಂಕು ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ADVERTISEMENT

‘ಭಗವಂತ ರಾಮನನ್ನು ಆರಾಧಿಸುತ್ತಿದ್ದ ವೇದಿಕೆ ಮೇಲೆ ರಿಂಕು ಕ್ಯಾಬ್ರೆ ನೃತ್ಯ ಮಾಡಿದ್ದಾರೆ’ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಅಲೋಕ್ ಸಿಂಗ್ ಹೇಳಿದ್ದಾರೆ.

ಪ್ರಾಥಮಿಕ ತನಿಖೆ ಬಳಿಕ ಸೋಮವಾರ ಸಂಜೆ ಎಫ್‌ಐಆರ್ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಅಶ್ಲೀಲ ವಿಡಿಯೊ ಹರಿದಾಡುತ್ತಿದ್ದು, ಆ ಬಗ್ಗೆ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸರ್ಕಲ್ ಇನ್ಸ್‌ಪೆಕ್ಟರ್ ಸೂಚಿಸಿದ್ದಾರೆ ಎಂದು ಗೋವರ್ಧನ್ ಪೊಲೀಸ್ ಠಾಣೆಯ ಅಧಿಕಾರಿ ನೀಲಂ ಶ್ರೀವಾಸ್ತವ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.