
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ
ಪಿಟಿಐ ಚಿತ್ರ
ಗುವಾಹಟಿ: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್‌ಗಾಂಧಿ ಹಾಗೂ ಕಾಂಗ್ರೆಸ್‌ನ ಇತರ ನಾಯಕರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.
'ಕಾಂಗ್ರೆಸ್ ಕಾರ್ಯಕರ್ತರು ಹಿಂಸಾಚಾರ, ಸಾರ್ವಜನಿಕ ಆಸ್ತಿಗೆ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆಯಂತಹ ಕೃತ್ಯ ಎಸಗಿದ್ದಾರೆ. ಅವರಿಗೆ ಪ್ರಚೋದನೆ ನೀಡಿದ ಆರೋಪದಲ್ಲಿ ರಾಹುಲ್ ಗಾಂಧಿ, ಕೆ.ಸಿ ವೇಣುಗೋಪಾಲ್, ಕನ್ನಯ್ಯ ಕುಮಾರ್ ಮತ್ತು ಇತರ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಅವರು ‘ಎಕ್ಸ್’ನಲ್ಲಿ ಬರೆದಿದ್ದಾರೆ.
ಶರ್ಮ ಅವರು ಇದಕ್ಕೂ ಮೊದಲು ರಾಹುಲ್ ವಿರುದ್ಧ ದೂರು ದಾಖಲಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಜಿ.ಪಿ.ಸಿಂಗ್ ಅವರಿಗೆ ಸೂಚನೆ ನೀಡಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಅವರು ಎಕ್ಸ್ ಜಾಲತಾಣದಲ್ಲಿ ಹಂಚಿಕೊಂಡಿದ್ದ ವಿಡಿಯೋವನ್ನೇ ಸಾಕ್ಷ್ಯವಾಗಿ ಬಳಸಲೂ ಸೂಚಿಸಿದ್ದರು. ‘ಯಾತ್ರೆ ತಡೆಯಲು ಅವಕಾಶ ಕೊಡುವುದಿಲ್ಲ. ನೀವು ಎಷ್ಟಾದರೂ ಲಾಠಿಗಳನ್ನು ಬಳಸಿ. ಈ ಯುದ್ಧ ಮುಂದುವರಿಯಲಿದೆ’ ಎಂದು ಶ್ರೀನಿವಾಸ್ ಹೇಳಿರುವುದು ವಿಡಿಯೊದಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.