ಇಮ್ರಾನ್ ಪ್ರತಾಪ್‌ಗಡಿ
- ಎಕ್ಸ್ ಚಿತ್ರ
ಜಾಮ್‌ನಗರ: ಪ್ರಚೋದನಕಾರಿ ಹಾಡಿನೊಂದಿಗೆ ಎಡಿಟ್ ಮಾಡಿದ ವಿಡಿಯೊ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಕಾಂಗ್ರೆಸ್‌ನ ರಾಜ್ಯಸಭಾ ಸಂಸದ ಇಮ್ರಾನ್ ಪ್ರತಾಪ್‌ಗಡಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಗುಜರಾತ್‌ನ ಜಾಮ್‌ನಗರದಲ್ಲಿ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಪ್ರಚೋದನಕಾರಿ ಹಾಡು ಇರುವ ವಿಡಿಯೊವನ್ನು ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಆರೋಪದಡಿ ಇಮ್ರಾನ್, ಸ್ಥಳೀಯ ಕಾಂಗ್ರೆಸ್ ನಾಯಕ ಅಲ್ತಾಫ್ ಖಾಫಿ ಮತ್ತು ಕಾರ್ಯಕ್ರಮವನ್ನು ಆಯೋಜಿಸಿದ್ದ ಟ್ರಸ್ಟ್ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
ಡಿ. 29 ರಂದು ಇಮ್ರಾನ್ ಪ್ರತಾಪ್‌ಗಢಿ ಭಾಗವಹಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ವಿಡಿಯೊವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದರಲ್ಲಿ ಪ್ರಚೋದನಾಕಾರಿ ಹಾಡು ಬಳಸಲಾಗಿದೆ ಎಂದು ಜಾಮ್‌ನಗರ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ” ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರೇಮ್‌ಸುಖ್ ದೇಲು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.