ADVERTISEMENT

ವೆಬ್‌ಸೈಟ್‌ನಲ್ಲಿ ಪತ್ರಕರ್ತೆಯ ಭಾವಚಿತ್ರ ದುರ್ಬಳಕೆ: ಎಫ್ಐಆರ್ ದಾಖಲು

ಪಿಟಿಐ
Published 2 ಜನವರಿ 2022, 11:52 IST
Last Updated 2 ಜನವರಿ 2022, 11:52 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಪತ್ರಕರ್ತೆಯ ಭಾವಚಿತ್ರವನ್ನು ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಿ ಅವಹೇಳನ ಮಾಡಿರುವ ಆರೋಪದಲ್ಲಿ ದೆಹಲಿಯ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಗಳ ವಿರುದ್ಧ ಭಾನುವಾರ ಎಫ್‌ಐಆರ್‌ ದಾಖಲಾಗಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್‌ನಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತೆ ಆನ್‌ಲೈನ್‌ ಮುಖಾಂತರ ದೂರು ಸಲ್ಲಿಸಿದ್ದು, ಅದರ ಪ್ರತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

‘ಬುಲ್ಲಿ ಬಾಯಿ’ ಹೆಸರಿನ ವೆಬ್‌ಸೈಟ್‌ನಲ್ಲಿ ಅಪರಿಚಿತ ಗುಂಪೊಂದು ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿ ಪತ್ರಕರ್ತೆ ದೂರು ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ಸಾಮಾಜಿಕ ಮಾಧ್ಯಮಗಳಲ್ಲಿ ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ಮತ್ತು ಕಿರುಕುಳ ನೀಡುವ ಗುಂಪೊಂದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಕರ್ತೆ ದೂರಿನಲ್ಲಿ ಕೋರಿದ್ದಾರೆ.

ಮುಸ್ಲಿಂ ಮಹಿಳೆಯರನ್ನು ಅವಮಾನಿಸುವ ಉದ್ದೇಶದಿಂದಲೇ ‘ಬುಲ್ಲಿ ಬಾಯಿ’ ವೆಬ್‌ಸೈಟ್‌ ಅನ್ನು ರಚಿಸಲಾಗಿದೆ ಎಂದೂ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.