ADVERTISEMENT

ಧಾರ್ಮಿಕ ಭಾವನೆಗಳಿಗೆ ಧಕ್ಕೆ: ಠಾಣೆಗೆ ಹಾಜರಾಗಲು ರಾಮ್‌ದೇವ್‌ಗೆ HC ನಿರ್ದೇಶನ

ಪಿಟಿಐ
Published 13 ಸೆಪ್ಟೆಂಬರ್ 2023, 11:44 IST
Last Updated 13 ಸೆಪ್ಟೆಂಬರ್ 2023, 11:44 IST
ಬಾಬಾ ರಾಮದೇವ್
ಬಾಬಾ ರಾಮದೇವ್   

ಜೋಧಪುರ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾರ್ಮರ್ ಚೋಟಾನ್‌ ಪೊಲೀಸ್‌ ಠಾಣೆಯಲ್ಲಿ ಅ. 5ರಂದು ಹಾಜರಾಗುವಂತೆ ಯೋಗ ಗುರು ಬಾಬಾ ರಾಮದೇವ್‌ಗೆ ರಾಜಸ್ಥಾನ ಹೈಕೋರ್ಟ್ ನಿರ್ದೇಶಿಸಿದೆ.

ತನಿಖಾಧಿಕಾರಿ ಯಾವಾಗೆಲ್ಲ ಕರೆಯುತ್ತಾರೋ ಆಗ ಠಾಣೆಗೆ ಹಾಜರಾಗಬೇಕು ಎಂದು ರಾಮ್‌ದೇವ್‌ಗೆ ಹೈಕೋರ್ಟ್ ಹೇಳಿದೆ. ಜತೆಗೆ ಪ್ರಕರಣದ ದಿನಚರಿಯನ್ನು ಅ. 16ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ಗೆ ಸೂಚಿಸಿದೆ. ಜತೆಗೆ ರಾಮ್‌ದೇವ್ ಬಂಧನಕ್ಕೆ ನೀಡಿದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ.

ಎಫ್‌ಐಆರ್ ರದ್ದು ಕೋರಿ ಬಾಬಾ ರಾಮ್‌ದೇವ್ ಹೈಕೋರ್ಟ್‌ ಮೊರೆ ಹೋಗಿದ್ದರು.

ADVERTISEMENT

2023ರ ಫೆ. 2ರಂದು ಬಾರ್ಮರ್‌ನಲ್ಲಿ ನಡೆದಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಬಾಬಾ ರಾಮ್‌ದೇವ್ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದರು. ಹಿಂದಿನ ವಿಚಾರಣೆ ವೇಳೆ ರಾಮ್‌ದೇವ್‌ ಬಂಧನಕ್ಕೆ ನ್ಯಾಯಾಲಯ ತಡೆ ನೀಡಿತ್ತು. ಮೇ 20ರಂದು ತನಿಖಾಧಿಕಾರಿ ಎದುರು ಹಾಜರಾಗುವಂತೆಯೂ ಸೂಚಿಸಿತ್ತು. ಆದರೆ ರಾಮ್‌ದೇವ್ ಹಾಜರಾಗಿರಲಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.